Advertisement

Fight: ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ- ಪತ್ನಿ ಸಾವು, ಪತಿ ಗಂಭೀರ

01:13 AM Nov 06, 2023 | Team Udayavani |

ಕುದ್ಮಾರು: ಪತಿ-ಪತ್ನಿ ಜಗಳ ವಿಪರೀತ ಮಟ್ಟಕ್ಕೆ ಹೋಗಿ ಸಾವಿನಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪಲ್ಲದಲ್ಲಿ ನ. 4ರಂದು ಸಂಜೆ ನಡೆದಿದೆ.

Advertisement

ಕುಸುಮಾ (39) ಮತ್ತು ಆಕೆಯ ಪತಿ ಸಂಜೀವನ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಅಂತೆಯೇ ಶನಿವಾರ ಕೂಡ ಮಾತಿಗೆ ಮಾತು ಬೆಳೆದು ಜಗಳ ಬೇರೆಯೇ ಸ್ವರೂಪ ಪಡೆದುಕೊಂಡಿತ್ತು. ಕೋಪದ ಭರದಲ್ಲಿ ಇಬ್ಬರು ಕೂಡ ವಿಷ ಸೇವನೆ ಮಾಡಿ¨ªಾರೆ.

ಜಗಳವಾಡಿ ದಂಪತಿ ವಿಷ ಸೇವಿಸಿರುವ ವಿಚಾರ ಸ್ಥಳೀಯರಿಗೆ ತಿಳಿದು ತತ್‌ಕ್ಷಣ ಅವರ ಸಂಬಂಧಿಕರಿಗೆ ವಿಚಾರ ಮುಟ್ಟಿಸಿದ್ದರು. ಅವರು ಬಂದು ತತ್‌ಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸುವ ಪ್ರಯತ್ನದಲ್ಲಿ¨ªಾಗ ಕುಸುಮಾ ತನ್ನ ಪ್ರಾಣವನ್ನು ಕಳೆದುಕೊಂಡಿದ್ದರು. ಆದರೆ ಸಂಜೀವ ಜೀವನ್ಮರಣ ಸ್ಥಿತಿಯಲ್ಲಿದ್ದರು. ಕೂಡಲೇ ಸಂಜೀವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next