Advertisement

Iran; ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಭೀಕರ ಅಗ್ನಿ ಅವಘಡ: 27 ಮಂದಿ ಮೃತ್ಯು

02:35 PM Nov 03, 2023 | Team Udayavani |

ಟೆಹರಾನ್: ಉತ್ತರ ಇರಾನ್‌ನಲ್ಲಿರುವ ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಶುಕ್ರವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

Advertisement

ರಾಜಧಾನಿ ಟೆಹ್ರಾನ್‌ನ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಲ್ಯಾಂಗ್‌ರೌಡ್ ನಗರದಲ್ಲಿ ಸಂಭವಿಸಿದ ಭೀಕರ ಅವಘಡದಲ್ಲಿ ಕನಿಷ್ಠ ಹದಿನೇಳು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿಯನ್ನು ನಂದಿಸಲಾಗಿದ್ದು, ಅಧಿಕಾರಿಗಳು ಅವಘಡಕ್ಕೆ ಕಾರಣವನ್ನು ತನಿಖೆ ನಡೆಸುತ್ತಿದ್ದಾರೆ. ಇಂತಹ ಅವಘಡಗಳು ಅಪರೂಪವಲ್ಲ, ಮುಖ್ಯವಾಗಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯ, ಹಳೆಯ ಮಾದರಿಯ ಸೌಲಭ್ಯಗಳು ಮತ್ತು ಅಸಮರ್ಪಕ ತುರ್ತು ಸೇವೆಗಳು ಕಾರಣ ಎಂದು ಹೇಳಲಾಗಿದೆ.

ಸೆಪ್ಟೆಂಬರ್‌ನಲ್ಲಿ, ಇರಾನ್‌ನ ರಕ್ಷಣ ಸಚಿವಾಲಯದ ಒಡೆತನದ ಕಾರ್ ಬ್ಯಾಟರಿ ಕಾರ್ಖಾನೆಯಲ್ಲಿ ಒಂದು ವಾರದೊಳಗೆ ಎರಡನೇ ಬಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next