Advertisement

ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

08:06 PM Mar 12, 2023 | Team Udayavani |

ಸುಳ್ಯ: ಸುಳ್ಯ ತಾಲೂಕಿನ ಮಡಪ್ಪಾಡಿ ಸಮೀಪದ ಶೀರಡ್ಕ, ಹಾಡಿಕಲ್ಲು ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಉಂಟಾಗಿದೆ. ಕೆಲವು ದಿನಗಳಿಂದ ಶೀರಡ್ಕ, ಹಾಡಿಕಲ್ಲು ಭಾಗದಲ್ಲಿ ಅರಣ್ಯದಲ್ಲಿ ಕಾಡ್ಗಿಚ್ಚು ಕಂಡು ಬಂದಿದೆ. ಅರಣ್ಯ ಇಲಾಖೆಯ ತಂಡ ಸ್ಥಳದಲ್ಲಿ ಬೀಡು ಬಿಟ್ಟು ಕಾಡ್ಗಿಚ್ಚು ನಂದಿಸುವ ಪ್ರಯತ್ನ ನಡೆಸುತ್ತಾ ಬಂದಿದ್ಧಾರೆ.
ರವಿವಾರ ಶೀರಡ್ಕ ಭಾಗದಲ್ಲಿ ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆ ಮತ್ತು ಹೊಗೆ ಏಳುವುದು ಮಡಪ್ಪಾಡಿಗೆ ಕಂಡು ಬಂದಿದೆ. ಅಲ್ಲದೆ ಬೆಂಕಿ ಉರಿಯುವ ಭಾರೀ ಶಬ್ದವೂ ಸ್ಥಳೀಯರಿಗೆ ಕೇಳಿ ಬರುತ್ತಿದೆ.

Advertisement

ಕೆಲವು ದಿನಗಳಿಂದ ಕಾಡ್ಗಿಚ್ಚು ಕಂಡು ಬಂದಿದ್ದು ಕಾರ್ಯಾಚರಣೆ ನಡೆಸಲಾಗುತಿದೆ. ರವಿವಾರ ಕೂಡ ಶೀರಡ್ಕ ಭಾಗದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು ಅರಣ್ಯ ಇಲಾಖೆ ನಂದಿಸುವ ಕಾರ್ಯ ನಡೆಸಲಾಗುತಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

 

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next