Advertisement
ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ, ಕಾರವಾರ ಸೇರಿದಂತೆ ರಾಜ್ಯದ ಹಲವೆಡೆ ಅರಣ್ಯ ಭೂಮಿ ಸಾಗುವಳಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 25 ಸಾವಿರ ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ರೈತರಿಗೆ ನೋಟಿಸ್ ಕೊಟ್ಟು ಕೋರ್ಟಿಗೆ ಅಲೆದಾಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.
ಭೂ ಸುಧಾರಣಾ ಕಾಯ್ದೆ ಮೂಲಕ ಬಡವರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್ ಪಕ್ಷ. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಫಾರಂ 50, 53 ಜಾರಿಗೆ ತಂದು ಲಕ್ಷಾಂತರ ಭೂ ಹೀನ ರೈತರಿಗೆ ಭೂಮಿ ಕೊಡಲಾಗಿದೆ ಆದರೆ ಇತಿಹಾಸ ಮರೆಮಾಚುವ ಬಿಜೆಪಿ ನಾಯಕರು ಈಗ ಪ್ರತಿಪಕ್ಷಗಳ ಬಗ್ಗೆ ಆರೋಪ ಮಾಡುವುದು ಸರಿಯಲ್ಲ ಎಂದರು.