Advertisement

ಗಾಂಧಿ ತತ್ವದ ಮೂಲಕ ಉತ್ತಮ ಸಮಾಜ ಸಾಧ್ಯ

07:09 AM Jan 12, 2019 | |

ಬೆಂಗಳೂರು: ಆಧುನಿಕ ಯುಗದಲ್ಲಿ ಮಹಾತ್ಮ ಗಾಂಧಿ ಅವರ ತತ್ವಗಳನ್ನು ಪಾಲಿಸಿ ಉತ್ತಮ ಸಮಾಜ ಕಟ್ಟುವುದು ಎಲ್ಲರ ಜವಾಬ್ದಾರಿ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗವು ಜ್ಞಾನಭಾರತಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಇಂದಿನ ದಿನಗಳಲ್ಲಿ ಗಾಂಧಿಯ ಪ್ರಸ್ತುತತೆ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

Advertisement

ಉತ್ತಮ ಸಮಾಜ ನಿರ್ಮಾಣದಲ್ಲಿ ಗಾಂಧೀಜಿಯವರ ಆದರ್ಶ ಏನು ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ದೇಶದಲ್ಲಿ ಸಮಾನತೆಗಾಗಿ ಹೋರಾಟ ಮಾಡಿದ ಗಾಂಧೀಜಿ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜೀವನದ ಕುರಿತು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು ಮತ್ತು ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಗಾಂಧೀಜಿ ಅವರು ಕನಸಿನ ಭಾರತದಲ್ಲಿ ಜಾತಿ, ವರ್ಗ ಇರಲಿಲ್ಲ. ಸ್ವಾತಂತ್ರ್ಯಕ್ಕಾಗಿ ದೇಶದ ಎಲ್ಲ ವರ್ಗದವರನ್ನು ಒಂದು ಮಾಡಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದರು. ಗಾಂಧೀಜಿಯವರ ವ್ಯಕ್ತಿತ್ವದಲ್ಲಿ ಸಂಸ್ಕೃತಿ ನೋಡಬಹದು ಎಂದರು.

ಬೆಂಗಳೂರು ವಿವಿ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌ ಮಾತನಾಡಿದರು.ಒಸ್ಮಾನಿಯಾ ವಿವಿಯ ಇತಿಹಾಸ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಅಡಪ ಸತ್ಯನಾರಾಯಣ, ಬೆಂವಿವಿ ಇತಿಹಾಸ ವಿಭಾಗದ ಪ್ರೊ. ಎಸ್‌.ನಾಗರತ್ನಮ್ಮ, ಪ್ರೊ.ಎಂ. ಜಮುನ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next