Advertisement

ಉತ್ತಮ ಸಮಾಜಕ್ಕೆ ಸಂಘ ಸಂಸ್ಥೆಗಳ ಸಹಕಾರ ಅಗತ್ಯ : ಸುನಿಲ್‌

08:59 PM Dec 09, 2019 | mahesh |

ಮಡಿಕೇರಿ: ಉತ್ತಮ ಸಮಾಜ ನಿರ್ಮಿಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಅಪಾರವಾದದ್ದು, ಜಿಲ್ಲೆ ಅತಿವೃಷ್ಟಿಗೆ ಸಿಲುಕಿದಾಗ ವಿವಿಧ ಸಂಘ, ಸಂಸ್ಥೆಗಳು ನಿರೀಕ್ಷೆಗೂ ಮೀರಿ ಸಹಕಾರ ನೀಡಿವೆ ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಪಿ.ಸುನಿಲ್‌ ಸುಬ್ರಮಣಿ ನೆನಪಿಸಿಕೊಂಡಿದ್ದಾರೆ.

Advertisement

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೋದನಾ ಕೊಠಡಿ ಹಾಗೂ ಕಂಪ್ಯೂಟರ್‌ ಲ್ಯಾಬ್‌ನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅತಿವೃಷ್ಟಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಹಲವು ಸಮಸ್ಯೆಗಳು ಎದುರಾದಂತಹ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳು ಜಿಲ್ಲೆಗೆ ಉದಾರ ನೆರವು ನೀಡಿದನ್ನು ಸ್ಮರಿಸಿದರು.

ಆಚಾರ್ಯ ಪಾಠಶಾಲಾ ಶಿಕ್ಷಣ ದತ್ತಿ ಸಂಸ್ಥೆಯ ಅಧ್ಯಕ್ಷರಾದ ಟಿ.ವಿ.ಮಾರುತಿ ಅವರು ಜಿಲ್ಲೆಯಲ್ಲಿ 2018 ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಇಲ್ಲಿನ ಜನರು ಸಂಕಷ್ಟಕ್ಕೆ ತುತ್ತಾದರು. ಆದ್ದರಿಂದ ಜಿಲ್ಲೆಗೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಪದವಿ ಪೂರ್ವ ಕಾಲೇಜಿಗೆ 52 ಲಕ್ಷ ರೂ ವೆಚ್ಚದಲ್ಲಿ ನೂತನ ಎರಡು ತರಗತಿ ಕೊಠಡಿ, ಪ್ರಯೋಗಾಲಯ, ಹೈಟೆಕ್‌ ಶೌಚಾಲಯ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.

ಆಚಾರ್ಯ ಪಾಠಶಾಲಾ ಶಿಕ್ಷಣ ದತ್ತಿ ಸ್ಥಾಪಕರಾದ ಆಚಾರ್ಯ ಅವರ ಪುತ್ರ ಎ.ಪಿ ಆಚಾರ್ಯಬೆಂಗಳೂರಿನ ನೆಹರು ಕೋ-ಆಪರೇಟಿವ್‌ ಸೊಸೈಟಿ ವತಿಯಿಂದ ಕಟ್ಟಡಕ್ಕೆ ಅಗತ್ಯವಿರುವ ಪೀಠೊಪಕರಣಗಳನ್ನು ನೀಡಿದರು. ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜಿನ ದತ್ತಿ ನಿಧಿಯಿಂದ ನಗದು ಬಹುಮಾನ ನೀಡಲಾಯಿತು. ಉಪಾಧ್ಯಕ್ಷ ಭರತ್‌, ಎ.ಪಿ.ಆಚಾರ್ಯ, ಖಜಾಂಚಿ ಗಳಾದ ಕೆ.ಎಲ್‌.ರಮೇಶ್‌, ಪ್ರಧಾನ ಕಾರ್ಯದರ್ಶಿ ಪೊ›. ಕೆ.ಪಿ.ನರಸಿಂಹಮೂರ್ತಿ, ಎ.ಮುರು ಳೀಧರ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್‌ ಪಿ.ಆರ್‌, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ದೇವಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ದನಂಜಯ ಎ.ಪಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಭವಾನಿ, ನಿವೃತ್ತ ಪ್ರಾಂಶುಪಾಲ ಕೆಂಚಪ್ಪ ಜಿ, ಶಕ್ತಿ ದಿನಪತ್ರಿಕೆಯ ವ್ಯವಸ್ಥಾಪಕರಾದ ಪ್ರಜ್ಞಾ ಇತರರು ಉಪಸ್ಥಿತರಿದ್ದರು.‌

“ಆದರ್ಶಮೈಗೂಡಿಸಿ’
ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದ ಶ್ರೀ ಬೋಧ ಸ್ವರೂಪನಂದಜೀ ಸ್ವಾಮೀಜಿ ಅವರು ಮಾತನಾಡಿ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಒಳ್ಳೆಯ ಶಿಕ್ಷಣ ಪಡೆದು ಸಮಾಜಕ್ಕೆ ತಮ್ಮದೇ ಆದ ಉತ್ತಮ ಕೊಡುಗೆ ನೀಡಬೇಕು ಎಂದು ಅವರು ಸಲಹೆ ಮಾಡಿದರು.  ಆಚಾರ್ಯ ಪಾಠ ಶಾಲೆ ಶಿಕ್ಷಣ ದತ್ತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ‌ರಸಿಂಹ ಮೂರ್ತಿ ಅವರುಮಾತನಾಡಿ ಕೊಡಗು ಸೈನ್ಯಕ್ಕೆ, ಶಿಸ್ತಿಗೆ ಹೆಸರುವಾಸಿ ವಿದ್ಯಾರ್ಥಿಗಳು ಉತ್ತಮ ಶಿಸ್ತನ್ನು ರೂಡಿಸಿಕೊಂಡು ಯಶಸ್ವಿಗೊಳಿಸಬೇಕು ಹಾಗೂ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿ ಸ್ವಚ್ಚ ಭಾರತ ಯೋಜನೆಯನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next