Advertisement
ನಗರದ ಬಾಲಭವನ ಸಭಾಂಗಣದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ನೆಹರು ಯುವಕೇಂದ್ರದ ಸಹಯೋಗದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜಿಲ್ಲಾ ಮಟ್ಟದ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Related Articles
Advertisement
ಭಾರತ ವಿಭಿನ್ನ ಸಂಸ್ಕೃತಿ, ಸಂಪ್ರದಾಯಗಳ ದೇಶ. ಪಾಶ್ಚಾತ್ಯ ದೇಶದ ಅನುಕರಣೆಯಿಂದ ಧೂಮಪಾನ, ಮದ್ಯಪಾನದಂತಹ ದುಶ್ಚಟಗಳ ದಾಸರಾಗಿದ್ದೇವೆ. ಸಂತೋಷ ಮತ್ತು ದುಃಖಗಳ ಸಂದರ್ಭಗಳಲ್ಲೂ ಮದ್ಯಪಾನ ಮಾಡಿ ಸಂಭ್ರಮಿಸುವುದು ಪಾಶ್ಚತ್ಯ ದೇಶದ ಸಂಸ್ಕೃತಿಯಾಗಿದೆ.
ಈ ಸಂಸ್ಕೃತಿ ನಮ್ಮದಲ್ಲ. ಇದನ್ನು ಯುವ ಶಕ್ತಿ ಅರಿತು ನೈತಿಕ ಬದುಕಿನ ದಾರಿ ಕಂಡುಕೊಳ್ಳಬೇಕು ಎಂದು ಹೇಳಿದರು. ಮದ್ಯಪಾನ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಿ ಕ್ರಾಂತಿಕಾರಿ ಬದಲಾವಣೆ ಮೂಲಕ ಶುದ್ಧ ಜೀವನದ ಹಾದಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಪಂ ಅಧ್ಯಕ್ಷೆ ಲತಾ ಮಾತನಾಡಿದರು. ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅಚರ್ಡ್ ಸಂಸ್ಥೆಯ ಡಾ.ಎಚ್.ಜಿ.ಸದಾಶಿವಯ್ಯ ಉಪನ್ಯಾಸ ನೀಡಿದರು. ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ.ರೋಹಿಣಿ, ಆಶಾ ಕಾರ್ಯಕರ್ತೆಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ನೆಹರು ಯುವ ಕೇಂದ್ರದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
ದುಡಿದಿದ್ದನ್ನು ಕುಡಿತಕ್ಕೆ ಹಾಕಿ ದೇಹ, ಮನಸ್ಸು ಮತ್ತು ಮನೆ ಹಾಳು ಮಾಡಿಕೊಂಡು ಬೀದಿಪಾಲಾಗಿರುವ ಎಷ್ಟೋ ಕುಟುಂಬಗಳಿವೆ. ಇದು ಗೊತ್ತಿದ್ದರೂ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಮೂರ್ಖತನದ ಪರಮಾವಧಿ. ಇದನ್ನು ಅರಿತು ಪ್ರತಿಯೊಬ್ಬರೂ ಜೀವನ ಸುಂದರವಾಗಿಸಿಕೊಳ್ಳುವುದು ಅಥವಾ ವಿಕೃತಗೊಳಿಸಿಕೊಳ್ಳುವುದು ಅವರವರ ಕೈಯಲ್ಲಿದೆ ಎಂದು -ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ