Advertisement

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ: ಆರ್.ವಿ.ದೇಶಪಾಂಡೆ

09:40 PM Aug 01, 2023 | Team Udayavani |

ಹಳಿಯಾಳ : ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೆ ನಾಲ್ಕು ಯೋಜನೆಗಳನ್ನು ಅನುಷ್ಠಾನ ಪಡಿಸಿದ್ದು, ಯುವ ನಿಧಿ ಯೋಜನೆಗೆ ಡಿಸೆಂಬರ್ ತಿಂಗಳಲ್ಲಿ ಚಾಲನೆ ದೊರೆಯಲಿದೆ. ನುಡಿದಂತೆ ನಡೆದ ಮತ್ತು ನಡೆಯುವ ಸರಕಾರವಿದ್ದರೇ ಅದು ಕಾಂಗ್ರೆಸ್ ಸರಕಾರ ಮಾತ್ರ ಎಂದು ಶಾಸಕರಾದ ಆರ್.ವಿ.ದೇಶಪಾಂಡೆಯವರು ಹೇಳಿದರು.

Advertisement

ಅವರು ಹಳಿಯಾಳ ಪಟ್ಟಣದ ಗೃಹ ಕಚೇರಿಯಲ್ಲಿ ಇಂದು ಮಂಗಳವಾರ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಕ್ತಿ ಯೋಜನೆಯ ಮೂಲಕ ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಜಾರಿಗೊಳಿಸುವ ಮೂಲಕ ವಿಶಿಷ್ಟ ಕಾರ್ಯಕ್ರಮವನ್ನು ಜಾರಿಗೊಳಿಸಿದ ಹೆಗ್ಗಳಿಕೆ ರಾಜ್ಯದ ಕಾಂಗ್ರೆಸ್ ಸರಕಾರಕ್ಕಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿಯ ಅಕ್ಕಿಯ ಬದಲಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ನೇರ ಜಮಾ ಮಾಡಲಾಗುತ್ತದೆ ಎಂದರು.

ಹಳಿಯಾಳ ಜೋಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ಗೃಹಜ್ಯೋತಿ ಯೋಜನೆಗೆ ಒಟ್ಟು 45,422 ಕುಟುಂಬಗಳು ಅರ್ಜಿ ಸಲ್ಲಿಸಿವೆ. ಗೃಹಲಕ್ಷ್ಮೀ ಯೋಜನೆಗೆ ಕ್ಷೇತ್ರದಲ್ಲಿ 32,778 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ ಎಂದರು.

ಈಗಾಗಲೆ ಅತಿವೃಷ್ಟಿಯಿಂದಾದ ಹಾನಿಯಾದ ಕುಟುಂಬಗಳಿಗೆ ತ್ವರಿತಗತಿಯಲ್ಲಿ ಪರಿಹಾರವನ್ನು ಒದಗಿಸಲಾಗಿದೆ. 2023 ರ ಮುಂಗಾರು ಹಂಗಾಮಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನ ಪಡಿಸಲಾಗಿದೆ. ಹಳಿಯಾಳ ಮತ್ತು ದಾಂಡೇಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈ ವರ್ಷದಿಂದ ಬಿ.ಸಿ.ಎಸ್ ಕೋರ್ಸ್ ಪ್ರಾರಂಭಿಸಲಾಗಿದೆ. ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಫೌಂಡೇಶನ್ ನಿಂದ ಒಟ್ಟು 122 ಪ್ರತಿಭಾವಂತ ಕುಣಬಿ ವಿದ್ಯಾರ್ಥಿಗಳಿಗೆ ರೂ:2,96,000/  ವಿದ್ಯಾರ್ಥಿ ವೇತನದ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next