Advertisement

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

11:45 PM Sep 18, 2024 | Team Udayavani |

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಅಧಿಕಾರಿಗಳ ಹಾಗೂ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಅ.4ರಿಂದ ಗ್ರಾಮ ಪಂಚಾಯತ್‌ ಸೇವೆಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟ ಮಾಡುವುದಾಗಿ ಕರ್ನಾಟಕ ರಾಜ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಹಾಗೂ ಸಂಬಂಧಪಟ್ಟ ಸಂಘಟನೆಗಳು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿವೆ.

Advertisement

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜು ವಾರದ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಹಾಗೂ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮಾಡಿದ ಮನವಿಗಳಿಗೆ ಸೂಕ್ತ ಸ್ಪಂದನೆ ದೊರೆತಿಲ್ಲ. ಆದರೆ ಎಲ್ಲ ಸಮಸ್ಯೆಗಳಿಗೂ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತಿದೆ. ಈ ಧೋರಣೆಯನ್ನು ಖಂಡಿಸಿ ಹೋರಾಟ ಮಾಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next