Advertisement

“ಸಂಸ್ಕೃತಿ, ಪರಂಪರೆಯಲ್ಲಿ ಗುರುವಿಗೆ ಮಹತ್ವದ ಸ್ಥಾನ’

06:25 AM Sep 06, 2018 | Team Udayavani |

ಬ್ರಹ್ಮಾವರ: ಭಾರತೀಯ ಸಂಸ್ಕೃತಿ,ಪರಂಪರೆಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ಶ್ರೇಷ್ಠ ಸ್ಥಾನದಲ್ಲಿರುವ ಶಿಕ್ಷಕರನ್ನು ಪ್ರತಿನಿತ್ಯವೂ ಗೌರವಿಸುವಂತಾಗಬೇಕು ಎಂದು ಶಾಸಕ ಕೆ. ರಘುಪತಿ ಭಟ್‌ ಹೇಳಿದರು.ಅವರು ಬುಧವಾರ ಧರ್ಮಾವರ ಆ ಡಿಟೋರಿಯಂನಲ್ಲಿ  ಶಿಕ್ಷಕರ ದಿನಾಚರಣೆ ಆಚರಣೆ ಸಮಿತಿ,  ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬ್ರಹ್ಮಾವರ ವಲಯ  ಇವುಗಳ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ-18 ಉದ್ಘಾಟಿಸಿ ಮಾತನಾಡಿದರು.

Advertisement

ಶಿಕ್ಷಿತರ,ಬುದ್ದಿವಂತರ ನಾಡು ಎಂದು ಕರೆಸಿಕೊಳ್ಳುವ ಕರಾವಳಿಯಲ್ಲಿ ಶಿಕ್ಷಕರ ಕೊಡುಗೆ ಬಹಳಷ್ಟಿದೆ. ಶಿಕ್ಷಕರ, ಶಿಕ್ಷಣ ಕ್ಷೇತ್ರದ ಸಮಸ್ಯೆ ಪರಿಹಾರಕ್ಕೆ ಪ್ರಥಮ ಆಧ್ಯತೆ ನೀಡುವುದಾಗಿ ಹೇಳಿದರು.

ಗೌರವಯುತ ಆಚರಣೆ
ಬ್ರಹ್ಮಾವರ ವಲಯದಲ್ಲಿ ಶಿಕ್ಷಕರ ದಿನವನ್ನು ಆಚರಿಸುವ, ಗೌರವಯುತ ವಾಗಿ ಸಮ್ಮಾನಿಸುವ ವಿಶಿಷ್ಟ ಸಂಪ್ರದಾಯ ವನ್ನು ಅಂದಿನ ಶಾಸಕ ಕೆ.ಜಯಪ್ರಕಾಶ್‌ ಹೆಗ್ಡೆ ಅವರು ಹುಟ್ಟು ಹಾಕಿದ್ದು, ಆನಂತರದ ಶಾಸಕರಾದ ಪ್ರಮೋದ್‌ ಮಧ್ವರಾಜ್‌, ರಘುಪತಿ ಭಟ್‌ ಅವರು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ ಎಂದು ಆಚರಣೆ ಸಮಿತಿಯ ಬಿರ್ತಿ ರಾಜೇಶ್‌ ಶೆಟ್ಟಿ ಹೇಳಿದರು.

ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಎಲ್ಲ ಶಿಕ್ಷಕರು ಭಾಗವಹಿಸಲು ಅವಕಾಶ ನೀಡಬೇಕು, ಶಿಕ್ಷಕರೇ ಅಭ್ಯರ್ಥಿಗಳಾಗಿರ ಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸುವಂತೆ ಮನವಿ ಮಾಡಿದರು.

ವಾರಂಬಳ್ಳಿ ಗ್ರಾ.ಪಂ. ಅಧ್ಯಕ್ಷ ನವೀನ್‌ಚಂದ್ರ ನಾಯಕ್‌ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯ ರಾದ ಜನಾರ್ದನ ತೋನ್ಸೆ, ಮೈರ್ಮಾಡಿ ಸುಧಾಕರ ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಸದಸ್ಯರಾದ ಸುಧೀರ್‌ ಕುಮಾರ್‌ ಶೆಟ್ಟಿ, ಡಾ| ಸುನೀತಾ ಡಿ. ಶೆಟ್ಟಿ, ತಾ. ದೈ.ಶಿ. ಪರಿವೀಕ್ಷಣಾಧಿಕಾರಿ ಭುಜಂಗ ಶೆಟ್ಟಿ, ಆಚರಣಾ ಸಮಿತಿಯ ಹರೀಶ್‌ ಶೆಟ್ಟಿ ಚೇರ್ಕಾಡಿ, ಶಿಕ್ಷಕ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Advertisement

ಸಮ್ಮಾನ
ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್‌ ಶ್ಯಾನುಭಾಗ್‌ ಅವರನ್ನು ಸಮ್ಮಾನಿಸಲಾಯಿತು. ವಲಯದ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಕೋರಲಾಯಿತು. ಕೊಡಗು ಹಾಗೂ ಕೇರಳದ ನೆರೆ ಸಂತ್ರಸ್ತರನ್ನು ಸ್ಮರಿಸಲಾಯಿತು.

ಬಿ.ಟಿ. ನಾಯ್ಕ ಸ್ವಾಗತಿಸಿ, ಬಿರ್ತಿ ರಾಜೇಶ್‌ ಶೆಟ್ಟಿ ಪ್ರಸ್ತಾವನೆಗೈದರು. ಶ್ರೀಕಾಂತ್‌ ಸಾಮಂತ್‌ ಮತ್ತು ಸತೀಶ್ಚಂದ್ರ ಶೆಟ್ಟಿ  ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next