Advertisement

ಸಿ ಬಿ ಎಸ್ ಇ ಪರೀಕ್ಷೆಗಳನ್ನು ರದ್ದುಗೊಳಿಸಿದ್ದು/ಮುಂದೂಡಿದ್ದು ಸ್ವಾಗತಾರ್ಹ : ಕೇಜ್ರಿವಾಲ್

03:14 PM Apr 14, 2021 | Team Udayavani |

ನವ ದೆಹಲಿ : ಸಿ ಬಿ ಎಸ್ ಇ 10 ನೇ ತರಗತಿ ಪರೀಕ್ಷೆಗಳು ರದ್ದಾಗಿದ್ದು ಹಾಗೂ 12 ನೇ ತರಗತಿಯ ಪರೀಕ್ಷೆಗಳು ಮುಂದೂಡಿರುವುದನ್ನು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಸ್ವಾಗತಿಸಿದ್ದಾರೆ.

Advertisement

ಕೇಂದ್ರ ಸರ್ಕಾರದ ಈ ಮಹತ್ತರದ ನಿರ್ಧಾರ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ದೊಡ್ಡ ನೆಮ್ಮದಿ ಸಿಕ್ಕಂತಾಗಿದೆ. ಕೋವಿಡ್ ಸೋಂಕಿನ ರೂಪಾಂತರಿ ಅಲೆಯು ಮತ್ತೆ ಹಠಾತ್ ಏರಿಕೆಯಾಗುತ್ತಿರುವ ಕಾರಣದಿಂದ ಪರೀಕ್ಷೆಗಳು ಈ ಭೀತಿಯ ನಡುವೆಯಲ್ಲೇ ನಡೆಯುತ್ತವೇ ಎಂಬ ಭಯ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಇದ್ದಿತ್ತು. ಕೇಂದ್ರ ಸರ್ಕಾರ ಸೂಕ್ತ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಓದಿ : ಬ್ಯಾಡ್ಮಿಂಟನ್ ತಾರೆ ಜ್ವಾಲಾಗುಟ್ಟಾ-ನಟ ವಿಷ್ಣು ವಿಶಾಲ್ ಮದುವೆ ಡೇಟ್ ಫಿಕ್ಸ್

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಪರೀಕ್ಷೆಗಳನ್ನು ರದ್ದುಗೊಳಿಸಿರುವುದು ಹಾಗೂ ಮುಂದೂಡಿರುವುದು ನನಗೆ ಸಂತಸವಾಗಿದೆ. ಇದು ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ದೊಡ್ಡ ನೆಮ್ಮದಿ ತಂದಿದೆ ಎಂದು ಅವರು ಹೇಳಿದ್ದಾರೆ.

ಕೋವಿಡ್ ಸೋಂಕಿನ ರೂಪಾಂತರಿ ಅಲೆಯ ಕಾರಣದಿಂದಾಗಿ ಪರೀಕ್ಷೆಗಳನ್ನು ಮುಂದೂಡಬೇಕು ಹಾಗೂ ರದ್ದುಗೊಳಿಸಬೇಕು ಎಂದು ಹಲವಾರು ಪೋಷಕರಿಂದ ಕೇಳಿಬಂದಿತ್ತು, ಈ ಹಿನ್ನಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ, ಈ ನಿರ್ಧಾರಕ್ಕೆ ಬರಲಾಗಿದೆ.

Advertisement

ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು  ಉಪ ಮುಖ್ಯ ಮಂತ್ರಿ ಮನೀಶ್ ಸಿಸೋಡಿಯಾ ಅವರು ಮಂಗಳವಾರ ಕೇಂದ್ರಕ್ಕೆ ಮನವಿ ಮಾಡಿದ್ದರು, ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾಗುತ್ತಿರುವುದರ ನಡುವೆ ಪರೀಕ್ಷೆ ನಡೆಸುವುದು ಸರಿಯಲ್ಲ. ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ನಡುವೆಯೂ ಪರೀಕ್ಷೆ ನಡೆಸುವುದರಿಂದ ಸೋಂಕಿನ ಪ್ರಮಾಣ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ಪರೀಕ್ಷೆಗಳನ್ನು ರದ್ದುಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದರು.

ಓದಿ : ಭ್ರಷ್ಟಾಚಾರದ ವಿರುದ್ಧ ಸಮರ ಅಸಹಾಯಕ ಹೆಣ್ಣಿನ ಚಿತ್ರ ಸಾರ ಆ್ಯಕ್ಟ್ 1978

Advertisement

Udayavani is now on Telegram. Click here to join our channel and stay updated with the latest news.

Next