ಬೆಳ್ತಂಗಡಿ:ನ್ಯಾಯಾಧೀಶರ ಕೊರತೆಯಿಂದ ನ್ಯಾಯ ಕೋರಿ ಬರುವವರಿಗೆ ನ್ಯಾಯ ಕೊಡಿಸಲಾಗದ ಅಸಹಾಯಕ ಪರಿಸ್ಥಿತಿ ಇದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅಬ್ದುಲ್ ನಜೀರ್ ಹೇಳಿದರು.
ಶನಿವಾರ ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ಕಟ್ಟಡದ ಶಿಲಾನ್ಯಾಸ ಹಾಗೂ ಗುರುವಂದನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೈಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮುಖ್ಯ ಅತಿಥಿಗ ಳಾಗಿದ್ದರು. ದ.ಕ.ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಬಿ. ವೀರಪ್ಪ ಅಧ್ಯಕ್ಷತೆ ವಹಿಸಿದ್ದರು. ಹೈಕೋರ್ಟ್ ನ್ಯಾಯ ಮೂರ್ತಿ ಮಹಮ್ಮದ್ ನವಾಜ್, ಸು. ಕೋರ್ಟ್‌ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್, ಕೇರಳ ಹೈಕೋರ್ಟ್ ನ್ಯಾಯಾಧೀಶ ನಗರೇಶ್, ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಕಡೂÉರು ಸತ್ಯನಾರಾಯಣಾಚಾರ್ಯ, ಪುತ್ತೂರು ನ್ಯಾಯಾಧೀಶ ಮಂಜು ನಾಥ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಕೆ. ಹರೀಶ್ ಕುಮಾರ್, ಮಾಜಿ ಶಾಸಕ ಕೆ. ವಸಂತ ಬಂಗೇರ, ರಾಜ್ಯ ವಕೀಲರ ಪರಿಷತ್ ಸದಸ್ಯ ಪಿ.ಪಿ. ಹೆಗ್ಡೆ, ಸಹಾಯಕ ಕಮಿಷ ನರ್ ಡಾ| ಎಚ್.ಕೆ. ಕೃಷ್ಣಮೂರ್ತಿ ಅತಿಥಿಗಳಾಗಿದ್ದರು.
ಎಸ್‌ಡಿಎಂ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ| ಎನ್.ಜೆ. ಕಡಂಬ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ವಕೀಲರ ಸಂಘದ ಅಧ್ಯಕ್ಷ ಸೇವಿಯರ್ ಪಾಲೇಲಿ ಸ್ವಾಗತಿ ಸಿದರು. ಕಾರ್ಯದರ್ಶಿ ಮನೋಹರ್‌ಕುಮಾರ್ ಎ. ವಂದಿಸಿ ದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಕೆ. ಧನಂಜಯ ರಾವ್ ಹಾಗೂ ಶೈಲೇಶ್ ಟೋಸರ್ ನಿರ್ವಹಿಸಿದರು.