Advertisement

HD Kumaraswamy: ಭಾರತೀಯ ಚುನಾವಣ ವ್ಯವಸ್ಥೆ ಸುಧಾರಣೆಗೆ ಐತಿಹಾಸಿಕ ಹೆಜ್ಜೆ

10:58 PM Sep 18, 2024 | Team Udayavani |

ಬೆಂಗಳೂರು: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯು ಭಾರತೀಯ ಚುನಾವಣ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇರಿಸಿರುವ ಐತಿಹಾಸಿಕ ಹೆಜ್ಜೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಬಣ್ಣಿಸಿದ್ದಾರೆ.

Advertisement

ಬುಧವಾರ ಹೊಸದಿಲ್ಲಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜೆಡಿಎಸ್‌ ಸ್ವಾಗತಿಸುತ್ತದೆ ಎಂದರು.

ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿ ವರದಿ ನೀಡಿದೆ. ಈ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ನರೇಂದ್ರ ಮೋದಿ ಅವರ ಸರಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆಯೇ ಸಂಪುಟವು ಈ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next