Advertisement
ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ತಂಡಗಳನ್ನು ರಚಿಸಿಕೊಂಡು ವಾರ್ಡ್‌ವಾರು ಸಮೀಕ್ಷೆ ಆರಂಭಿಸಬೇಕು. ಐದಕ್ಕಿಂತ ಹೆಚ್ಚಿನ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಪ್ರದೇಶದಿಂದ ಸಮೀಕ್ಷೆ ಆರಂಭಿಸಿ, ಎರಡು ದಿನಗಳೊಳಗಾಗಿ ವರದಿ ನೀಡಬೇಕೆಂದು ಆದೇಶಿಸಿದರು.
Related Articles
Advertisement
ಆಸ್ಪತ್ರೆಯಲ್ಲಿ ಸುಧಾರಿಸಿಕೊಂಡವರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಕಳುಹಿಸಿ, ಅಗತ್ಯ ವೈದ್ಯಕೀಯ ಉಪಚಾರ ಕಲ್ಪಿಸಬೇಕು ಎಂದರು. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಸಂಖ್ಯೆ ಕಡಿಮೆ ಇದ್ದರೂ ಕೋವಿಡ್‌ನಿಂದ ಮರಣ ಪ್ರಮಾಣ ಹೆಚ್ಚಾಗಿದೆ. ಜಿಲ್ಲೆಯ ಸೋಂಕಿತರನ್ನು ಬೇರೆ ಜಿಲ್ಲೆಗಳ ಆಸ್ಪತ್ರೆಗೆ ಕಳುಹಿಸುವ ಮೊದಲು ಅಲ್ಲಿ ಬೆಡ್ ವ್ಯವಸ್ಥೆ ಇದೆಯೇ ಎಂಬ ಪೂರ್ವ ಮಾಹಿತಿ ಪಡೆದು ರೋಗಿಗಳನ್ನು ದಾಖಲಿಸುವ ಕೆಲಸವಾಗಬೇಕು. ಅಕ್ಕಪಕ್ಕದ ಜಿಲ್ಲೆಗಳಲ್ಲೂ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿರುವ ಕಾರಣ ಬೆಡ್‌ಗಳು ದೊರೆಯದೆ ಜಿಲ್ಲೆಯ ಸೋಂಕಿತರಿಗೆ ತೊಂದರೆಯಾಗಬಾರದು ಎಂದು ಸಲಹೆ ನೀಡಿದರು.
ಎಲ್ಲ ಇಲಾಖಾ ಸಿಬ್ಬಂದಿ ಬಳಕೆ: ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ರೋಷನ್ ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಮಾನವ ಸಂಪನ್ಮೂಲ ಕೊರತೆಯನ್ನು ಸರಿದೂಗಿಸಲು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಯನ್ನು ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಪಾಳೆ ಪ್ರಕಾರ ಕರ್ತವ್ಯಕ್ಕೆ ನಿಯೋಜಿಸುವಂತೆ ಸಲಹೆ ನೀಡಿದರು. ವೈದ್ಯಕೀಯೇತರ ಕೋವಿಡ್ ನಿಯಂತ್ರಣ ಚಟುವಟಿಕೆಗೆ 36ಇಲಾಖೆ ಸಿಬ್ಬಂದಿಯನ್ನು ಬಳಸಿಕೊಂಡು ಕೋವಿಡ್ ಹತೋಟಿಗೆ ಕಾರ್ಯೋನ್ಮುಖರಾಗಬೇಕೆಂದರು.
ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಮಾತನಾಡಿ, ಹೋಂ ಐಸೋಲೇಷನ್ ನಲ್ಲಿರುವ ಸೋಂಕಿತರನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಬೇಕು ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ|ಜಯಾನಂದ ಹಾಗೂ ಸಹಾಯಕ ಔಷಧ ನಿಯಂತ್ರಕಿ ನೀಲಿಮಾ ಅವರು ಕೋವಿಡ್ ಮಾರ್ಗಸೂಚಿಗಳು, ವೈದ್ಯಕೀಯ ಚಿಕಿತ್ಸೆ, ಆಕ್ಸಿಜನ್ ಸರಬರಾಜಿನ ಮಾಹಿತಿಯನ್ನು ಸಭೆಗೆ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಉಪವಿಭಾಗಾಧಿಕಾರಿಗಳಾದ ಶಿವಾನಂದ ಉಳ್ಳಾಗಡ್ಡಿ, ಅನ್ನಪೂರ್ಣಾ ಮುದಕಮ್ಮನವರ, ಎಲ್ಲ ತಾಲೂಕು ತಹಶೀಲ್ದಾರ್‌ರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಭಾಗವಹಿಸಿದ್ದರು.