ಕಾನ್ಪುರ: ಘಟಂಪುರ ಪ್ರದೇಶದಲ್ಲಿ ಭಕ್ತರಿಂದ ತುಂಬಿದ್ದ ಟ್ರಾಕ್ಟರ್ ಟ್ರಾಲಿ ನಿಯಂತ್ರಣಕ್ಕೆ ಬಾರದೆ ಪಲ್ಟಿಯಾಗಿದೆ. ಮಾಹಿತಿಯ ಪ್ರಕಾರ, ಕನಿಷ್ಠ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ರಾತ್ರಿ ಭಕ್ತರು ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿಯು ಹೊಂಡಕ್ಕೆ ಉರುಳಿ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೊರ್ತಾ ಗ್ರಾಮದ ಸಂತ್ರಸ್ತರು, ಫತೇಪುರದ ದೇವಿ ದೇವಸ್ಥಾನದಿಂದ `ದರ್ಶನ’ ಮುಗಿಸಿ ಮನೆಗೆ ಮರಳುತ್ತಿದ್ದರು ಎಂದು ತಿಳಿದು ಬಂದಿದೆ.
ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದ್ದು, ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಕಾನ್ಪುರದ ಅಪಘಾತದಿಂದ ಕಂಗಾಲಾಗಿದ್ದೇನೆ. ನನ್ನ ಆಲೋಚನೆಗಳು ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಎಲ್ಲರೊಂದಿಗೂ ಇವೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ, ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರವನ್ನು ಮೃತರ ಸಂಬಂಧಿಕರಿಗೆ, ಗಾಯಾಳುಗಳಿಗೆ ರೂ. 50,000 ರೂ. ಪರಿಹಾರ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.