Advertisement

ಮೂರು ಪಕ್ಷಗಳಲ್ಲೂ ಭಾರೀ ಲಾಬಿ

02:35 AM Jun 11, 2020 | Sriram |

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಜತೆಗೆ ಟಿಕೆಟ್‌ಗಾಗಿ ಆಕಾಂಕ್ಷಿಗಳ ಲಾಬಿಯೂ ಆರಂಭವಾಗಿದೆ.

Advertisement

ಕೆಲವರು ನೇರವಾಗಿ ಹಿರಿಯ ನಾಯಕರನ್ನು ಭೇಟಿಯಾಗಿ ಅವಕಾಶಕ್ಕೆ ಮೊರೆ ಇಟ್ಟರೆ ಇನ್ನು ಕೆಲವರು ಸ್ವಾಮೀಜಿಗಳ ನಿಯೋಗ ದಲ್ಲಿ ತೆರಳಿ ಒತ್ತಡ ಹೇರಲಾರಂಭಿಸಿದ್ದಾರೆ. ಮೂರು ಪಕ್ಷಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇನ್ನಷ್ಟೇ ಆರಂಭವಾಗಬೇಕಿದೆ.

ಬಿಜೆಪಿ ನಾಲ್ಕು ಸ್ಥಾನ ಗೆಲ್ಲಲು ಅವಕಾಶವಿದ್ದು, ಆಕಾಂಕ್ಷಿಗಳು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಉಪಚುನಾವಣೆಯಲ್ಲಿ ಪರಾಭವಗೊಂಡ ಮಾಜಿ ಸಚಿವ ಎಂ.ಟಿ.ಬಿ. ನಾಗರಾಜ್‌ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅವಕಾಶಕ್ಕಾಗಿ ಮನವಿ ಮಾಡಿದರು.

ಇನ್ನೊಂದೆಡೆ ಕರ್ನಾಟಕ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪರಮಶಿವಯ್ಯ 20ಕ್ಕೂ ಸ್ವಾಮೀಜಿಗಳ ನಿಯೋಗ ದೊಂದಿಗೆ ಸಿಎಂ ಅವರನ್ನು ಭೇಟಿಯಾಗಿ ಅವಕಾಶಕ್ಕಾಗಿ ಮನವಿ ಮಾಡಿದ್ದಾರೆ. ರಂಭಾಪುರಿ ಪೀಠದ ಪ್ರಸನ್ನ ರೇಣುಕಾ ವೀರ ಸೋಮೇಶ್ವರ ಸ್ವಾಮೀಜಿ ಅವರನ್ನು ಸಿಎಂ ಬುಧವಾರ ಭೇಟಿಯಾದ ಸಂದರ್ಭದಲ್ಲೂ ವಿಚಾರ ಪ್ರಸ್ತಾವವಾಗಿದೆ ಎನ್ನಲಾಗಿದೆ.

ಕಾಂಗ್ರೆಸ್‌ನಲ್ಲೂ ಲಾಬಿ ತೀವ್ರ
ಕಾಂಗ್ರೆಸ್‌ನಲ್ಲಿ ಶುಕ್ರವಾರ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಭೆ ಕರೆಯಲಾಗಿದ್ದು, ಆಕಾಂಕ್ಷಿಗಳು ತೆರೆಮರೆಯಲ್ಲೇ ಲಾಬಿ
ತೀವ್ರಗೊಳಿಸಿದ್ದಾರೆ. ಕಾಂಗ್ರೆಸ್‌ 2 ಸ್ಥಾನ ಗೆಲ್ಲಲು ಅವಕಾಶವಿದ್ದು, 15ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ ಎನ್ನಲಾಗಿದೆ.

Advertisement

ಮಾಜಿ ಸಭಾಪತಿಗಳಾದ ಬಿ.ಎಲ್‌. ಶಂಕರ್‌, ವಿ.ಆರ್‌. ಸುದರ್ಶನ್‌, ವೀರಣ್ಣ ಮತ್ತಿಕಟ್ಟಿ, ಮಾಜಿ ಸಚಿವರಾದ ರಾಣಿ ಸತೀಶ್‌, ಎಚ್‌.ಎಂ. ರೇವಣ್ಣ, ನಸೀರ್‌ ಅಹಮದ್‌ ಅವರು ಹಿರಿತನದ ಮೇಲೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಇನ್ನೊಂದೆಡೆ ಜೆಡಿಎಸ್‌ ಒಂದು ಸ್ಥಾನ ಗೆಲ್ಲಲು ಅವಕಾಶವಿದ್ದು, ಜೆಡಿಎಸ್‌ನ ಕೆಲವು ಶಾಸಕರು ಬುಧವಾರ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ಕರೆದು ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲು ಗೌಡರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಅವಿರೋಧ ಆಯ್ಕೆ ಖಚಿತ
ಬೆಂಗಳೂರು: ರಾಜ್ಯಸಭೆ ಚುನಾ ವಣೆಗೆ ಸಲ್ಲಿಕೆಯಾಗಿದ್ದ ಐದು ನಾಮಪತ್ರ ಗಳಲ್ಲಿ ಒಂದು ತಿರಸ್ಕೃತಗೊಂಡಿದ್ದು, ನಾಲ್ಕು ಅಂಗೀ ಕಾರ ಗೊಂಡಿವೆ. ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ, ಅಶೋಕ್‌ ಗಸ್ತಿ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನ ಎಚ್‌.ಡಿ. ದೇವೇಗೌಡರ ನಾಮಪತ್ರಗಳು ಅಂಗೀಕಾರಗೊಂಡಿವೆ.

ಬುಧವಾರ ನಾಮಪತ್ರಗಳ ಪರಿಶೀಲನೆ ನಡೆದು, ಪಕ್ಷೇತರ ಅಭ್ಯರ್ಥಿ ಸಂಗಮೇಶ ಚಿಕ್ಕ ನರಗುಂದ ಅವರ ನಾಮಪತ್ರ ಸೂಚಕರ (ಶಾಸಕರ) ಸಹಿ ಇಲ್ಲದ ಕಾರಣ ತಿರಸ್ಕೃತ ಗೊಂಡಿತು. ಹೀಗಾಗಿ ನಾಲ್ವರ ಅವಿರೋಧ ಆಯ್ಕೆ ಖಚಿತವಾಗಿದ್ದು, ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿರುವ ಜೂ. 12ರಂದು ಅಧಿಕೃತ ಘೋಷಣೆಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next