Advertisement

ಬಂಟ್ವಾಳ: ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತ

07:21 PM Aug 24, 2022 | Team Udayavani |

ಬಂಟ್ವಾಳ: ಕಲ್ಲಡ್ಕ – ವಿಟ್ಲ ರಸ್ತೆಯ ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲಿಂಜ ಸಮೀಪದ ಕೋಡಪದವು ಕ್ರಾಸ್ ನ ಮಜ್ಜೊನಿ ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ಬೃಹತ್ ಗಾತ್ರದ ಮರವೊಂದು ಸಂಜೆ ವೇಳೆ ಗುಡ್ಡದ ಮೇಲಿಂದ ಬುಡ ಸಮೇತ ರಸ್ತೆಗೆ ಬಿದ್ದು ಕೆಲವು ಹೊತ್ತು ಸಂಚಾರಕ್ಕೆ ತೊಂದರೆಯಾಯಿತು.

Advertisement

ರಸ್ತೆಯ ಬದಿಯಲ್ಲಿ ಇದ್ದ ವಿದ್ಯುತ್ ತಂತಿಗೆ ಮರ ಬಿದ್ದ ಪರಿಣಾಮವಾಗಿ ಎರಡು ವಿದ್ಯುತ್ ಕಂಬಗಳು ಧರೆಗುರುಳಿವೆ.

ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಬಗ್ಗೆ ಘಟನೆ ತಿಳಿದು ಕೆಲಿಂಜ‌ ನಿವಾಸಿಯೊಬ್ಬರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.  ಅ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳ ತಂಡ ಹಾಗೂ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿ ಕೊಡಲಾಯಿತು.

ವೀರಕಂಭ ಗ್ರಾ.ಪಂ.ಅಧ್ಯಕ್ಷ ದಿನೇಶ್ ಪೂಜಾರಿ, ಸದಸ್ಯ ಜಯಪ್ರಸಾದ್ ಅವರು ಸ್ಥಳದಲ್ಲಿ ನಿಂತು ತೆರವು ಕಾರ್ಯಕ್ಕೆ ಸಹಕಾರ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next