Advertisement

ಎ.ಜೆ. ಆಸ್ಪತ್ರೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ದೂರು

02:29 AM May 17, 2020 | Sriram |

ಮಂಗಳೂರು: ನಗರದ ಎ.ಜೆ. ಆಸ್ಪತ್ರೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಅನಾಮಧೇಯ ವ್ಯಕ್ತಿಗಳು ಫೇಸ್ಬುಕ್ ನಲ್ಲಿ ‘ಪೋಸ್ಟ್‌ ಮ್ಯಾನ್‌’ ಎಂಬ ಹೆಸರಿನಲ್ಲಿ ಪೇಜ್‌ ತೆರೆದು ಎ.ಜೆ. ಆಸ್ಪತ್ರೆಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಹರಿಯ ಬಿಟ್ಟಿರುವ ಎ.ಜೆ. ಆಸ್ಪತ್ರೆ ಬಗೆಗಿನ ಸುದ್ದಿ ಆಧಾರರಹಿತ, ಅದರಲ್ಲಿ ಸತ್ಯಾಂಶ ವಿಲ್ಲ. ಇಂತಹ ಸುಳ್ಳು ಸುದ್ದಿ ಹಬ್ಬಿಸಿದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರಿನ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ಎ.ಜೆ. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಪ್ರಶಾಂತ್‌ ಮಾರ್ಲ ಅವರು ಶನಿವಾರ ದೂರು ಸಲ್ಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟನೆ ನೀಡಿರುವ ಡಾ| ಪ್ರಶಾಂತ್‌ ಮಾರ್ಲ ಅವರು, ‘ನಮ್ಮ ಆಸ್ಪತ್ರೆ ಕುರಿತಂತೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ತಪ್ಪು ಮಾಹಿತಿಗಳನ್ನು ಹರಿಯ ಬಿಡುತ್ತಿದ್ದಾರೆ. ಸರಕಾರಿ ನಿಯಮಗಳ ಪ್ರಕಾರ ಪಿಪಿಇ ಕಿಟ್‌ ಧರಿಸಿದ ಆರೋಗ್ಯ ಕಾರ್ಯಕರ್ತರು ಕ್ವಾರಂಟೈನ್‌ಗೆ ಒಳಗಾಗಬೇಕಿಲ್ಲ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ನಮ್ಮ ಆಸ್ಪತ್ರೆಯಲ್ಲಿ ಕೊರೊನಾ ಪತ್ತೆಯಾದ ರೋಗಿಯನ್ನು ನೋಡಿಕೊಂಡ 25 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಆದರೆ ಆಸ್ಪತ್ರೆಯಲ್ಲಿ 40ಕ್ಕೂ ಹೆಚ್ಚು ಕೋವಿಡ್‌-19 ಪಾಸಿಟಿವ್‌ ರೋಗಿಗಳಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಕೋವಿಡ್‌-19ಕ್ಕೆ ಸಂಬಂಧಿಸಿದಂತೆ ಸರಕಾರದ ಎಲ್ಲ ಮಾರ್ಗದರ್ಶನ ಅನುಸರಿಸುತ್ತಿದ್ದು, ಆಸ್ಪತ್ರೆಯಲ್ಲಿರುವ ರೋಗಿಗಳು ಮತ್ತು ಸಿಬಂದಿ ಆತಂಕಕ್ಕೆ ಒಳಗಾಗಬೇಕಿಲ್ಲ’ ಎಂದವರು ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next