Advertisement

ಇಶಾ ಯೋಗ ಕೇಂದ್ರದಲ್ಲಿ ಅದ್ದೂರಿ ಶಿವರಾತ್ರಿ

10:20 AM Feb 24, 2020 | sudhir |

ಕೊಯಮತ್ತೂರು: ಸದ್ಗುರು ಜಗ್ಗಿ ವಾಸುದೇವ್‌ ಅವರ ಇಶಾ ಯೋಗ ಕೇಂದ್ರದಲ್ಲಿ ಶುಕ್ರವಾರ ಮಹಾಶಿವರಾತ್ರಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಇಶಾ ಕೇಂದ್ರದಿಂದಲೇ ಆಯೋಜಿಸಲಾಗಿದ್ದ 26ನೇ ಮಹಾ ಶಿವರಾತ್ರಿ ಕಾರ್ಯಕ್ರಮ, ಫೆ. 21ರಂದು ಸಂಜೆ 6 ಗಂಟೆಗೆ ಆರಂಭವಾಗಿ 22ರ ಮುಂಜಾನೆ 6 ಗಂಟೆಗೆ ಮುಕ್ತಾಯವಾಯಿತು. ಸಹಸ್ರಾರು ಭಕ್ತರೊಂದಿಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಸದ್ಗುರು ಜಗ್ಗಿ ವಾಸುದೇವ್‌ ಅವರು ಬರೆದಿರುವ ಬಹು ನಿರೀಕ್ಷಿತ “ಡೆತ್‌- ಆ್ಯನ್‌ ಇನ್‌ಸೈಡ್‌ ಸ್ಟೋರಿ’ ಪುಸ್ತಕ ಬಿಡುಗಡೆ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next