Advertisement

Bantwal: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

06:14 PM Jun 08, 2024 | Team Udayavani |

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಶನಿವಾರ ಸಂಜೆ(ಜೂ.8 ರಂದು) ವೇಳೆ ನಡೆದಿದೆ.

Advertisement

ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (  47) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಇವರು ಸ್ಕೂಟರ್ ನಲ್ಲಿ ಬಿಸಿರೋಡಿನಿಂದ ಮುಡಿಪು ಕಡೆಗೆ ತನ್ನ ವೈಯಕ್ತಿಕ ಕೆಲಸದ ನಿಮಿತ್ತ ಸಂಚರಿಸುವ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿ ಚಾಲಕ ಇವರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾನೆ.

ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಳೆಯಲ್ಪಟ್ಟು ತಲೆಗೆ ಗಂಭೀರವಾದ ಏಟಾಗಿ ರಕ್ತಸ್ರಾವ ಉಂಟಾಗಿತ್ತು. ರಸ್ತೆಯ ಮಧ್ಯ ಭಾಗಕ್ಕೆ ಎಸೆಯಲ್ಪಟ್ಟ ಇವರನ್ನು ಪೊಲೀಸರು ಸ್ಥಳಕ್ಕೆ ಬರುವವರೆಗೂ ಯಾರು ಮುಟ್ಟಿಲ್ಲ, ಸುಮಾರು ಅರ್ಧ ತಾಸಿನವರೆಗೂ ಇವರ ಮೃತದೇಹ ರಸ್ತೆಯ ಮಧ್ಯ ಭಾಗದಲ್ಲಿತ್ತು ಎಂದು ಹೇಳಲಾಗಿದೆ.

ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Advertisement

ರಾಮ ನಾಯ್ಕ ಅವರು ಕಳೆದ ಅನೇಕ ವರ್ಷಗಳಿಂದ ಬಂಟ್ವಾಳ ಬೈಪಾಸ್ ನಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪ್ರಾಮಾಣಿಕ ಕೆಲಸಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು  ಗ್ರಾಹಕರ ಜೊತೆ ಉತ್ತಮ ಸಂಬಂಧವನ್ನು ಹೊಂದಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next