ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್, ಶಿಕ್ಷಕರ ವರ್ಗಾವಣೆಯಲ್ಲಿ ಸಾಕಷ್ಟು ಗೊಂದಲಗಳಿದ್ದರಿಂದ ಕಾಯ್ದೆಗೆ ತಿದ್ದುಪಡಿ ತರಲು ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಆದರೆ, ಅಲ್ಲಿ ವಿಧೇಯಕಕ್ಕೆ ಅಂಗೀಕಾರ ಪಡೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕೆಲವು ತಿದ್ದುಪಡಿ ಮಾಡಲು ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.
Advertisement
ಶಿಕ್ಷಕರು ಅಥವಾ ಅವರ ಕುಟುಂಬದವರು ಖಾಯಿಲೆಯಿಂದ ಬಳಲುತ್ತಿದ್ದು, ಅವರು ವಾಸಿಸುವ ಸ್ಥಳದಲ್ಲಿ ಸರಿಯಾದ ಚಿಕಿತ್ಸೆ ದೊರೆಯದೇ ಇದ್ದರೆ, ಬುದ್ದಿ ಮಾಂದ್ಯ ಮಕ್ಕಳನ್ನು ಹೊಂದಿದ್ದರೆ ಹಾಗೂ ಐದು ವರ್ಷದಿಂದ 3 ವರ್ಷಕ್ಕೆ ವರ್ಗಾವಣೆ ಬಯಸಿದರೆ ಅವಕಾಶ ಕಲ್ಪಿಸಲು ಕಾನೂನು ತಿದ್ದುಪಡಿ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.
– ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 81 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣಕ್ಕೆ ಜಮೀನು ಖರೀದಿಸಲು ತೀರ್ಮಾನ.
– ಆಲಮಟ್ಟಿ ಯೋಜನೆಯಲ್ಲಿ ಪುನರ್ ವಸತಿ ಕಲ್ಪಿಸಲು ಪರಿಷ್ಕೃತ ಅಂದಾಜು 7 ಕೋಟಿ ಹೆಚ್ಚಳಕ್ಕೆ ಅನುಮೋದನೆ.
– ಮುಂದಿನ ಐದು ವರ್ಷದಲ್ಲಿ ರೈತರ ಕೃಷಿ ಉತ್ಪಾದಕರ 500 ಸಂಘಗಳ ಸ್ಥಾಪನೆಗೆ 300 ಕೋಟಿ ರೂಪಾಯಿ ಮೀಸಲಿಡಲು ನಿರ್ಧಾರ.
– ಚಿಕ್ಕಮಗಳೂರು-ಬೇಲೂರು-ಸಕಲೇಶಪುರ ಹೊಸ ರೈಲು ಯೋಜನೆ ಕೇಂದ್ರ ರಾಜ್ಯ ಸಹಭಾಗಿತ್ವದಲ್ಲಿ 657 ಕೋಟಿ ರೂಪಾಯಿ ಯೋಜನೆಗೆ ಒಪ್ಪಿಗೆ
– ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿಗೆ ನೀಡಿದ್ದ 648 ಎಕರೆ ಜಮೀನು ಅರಣ್ಯ ಇಲಾಖೆಗೆ ವಾಪಸ್ ಪಡೆಯಲು ನಿರ್ಧಾರ.
– ವಿಜಯಪುರ ಜಿಲ್ಲೆಯ ತಿಕೋಟಾ ಹಾಗೂ 23 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ 73.64 ಕೋಟಿ ರೂಪಾಯಿ ಬಿಡುಗಡೆಗೆ ಒಪ್ಪಿಗೆ
– 60 ಹೊಸ ನಾಡಕಚೇರಿ ಸ್ಥಾಪನೆಗೆ 10 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ.
– 104 ಕ್ಕೂ ಮುಂಚೆ ಎಸ್‌ಎಸ್‌ಎಲ್‌ಸಿ ಪಾಸಾಗಿ ನೇಮಕಗೊಂಡಿರುವ ಗ್ರೇಡ್ 2 ಗ್ರಾಮ ಪಂಚಾಯತಿ 1 ಸಾವಿರ ಅಧಿಕಾರಿಗಳಿಗೆ ಬಡ್ತಿಗೆ ಅವಕಾಶ ಕಲ್ಪಿಸಲು ಸಂಪುಟ ಒಪ್ಪಿಗೆ
– ಬೆಟ್ಟ ಕುರುಬ ಸಮುದಾಯವನ್ನು ಕಾಡುಕುರುಬ ಎಸ್ಟಿ ಸಮುದಾಯಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಂಪುಟ ಅನುಮತಿ.
– ಚಿಕ್ಕೋಡಿ ತಾಲೂಕಿನಲ್ಲಿ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲು 139.55 ಕೋಟಿ ರೂಪಾಯಿ ಬಿಡುಗಡೆಗೆ ಒಪ್ಪಿಗೆ
– ಹಾಸನ ತಾಲೂಕಿನ ಶಾಂತಿ ಗ್ರಾಮದಲ್ಲಿ ಜೈನ್ ಕನ್‌ಸ್ಟ್ರಕ್ಷನ್ ಕಂಪನಿಗೆ 40 ಎಕರೆ ಜಮೀನು ನೀಡಲು ಸಂಪುಟ ಒಪ್ಪಿಗೆ
Related Articles
ನಿವೃತ್ತ ಐಎಎಸ್ ಅಧಿಕಾರಿ ಷಡಕ್ಷರಿ ಸ್ವಾಮಿ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಾಮ್ ಭಟ್ ಅವರ ಅವಧಿ ಮುಕ್ತಾಯವಾಗಿರುವುದರಿಂದ ನೂತನ ಅಧ್ಯಕ್ಷರ ನೇಮಕವಾಗುವವರೆಗೂ ಷಡಕ್ಷರಿ ಸ್ವಾಮಿಯನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಸಚಿವ ಬಂಡೆಪ್ಪ ಕಾಶಂಪೂರ್ ಹೇಳಿದರು. ಕಾಯಂ ಅಧ್ಯಕ್ಷರ ನೇಮಕ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸಂಪುಟ ನೀಡಿದೆ ಎಂದು ಹೇಳಿದರು.
Advertisement
ಜನವರಿಯಲ್ಲಿಯೇ ಜಂಟಿ ಅಧಿವೇಶನ.ರಾಜ್ಯ ಸರ್ಕಾರ ಹೊಸ ವರ್ಷದ ಜಂಟಿ ಅಧಿವೇಶನವನ್ನು ಜನವರಿ ತಿಂಗಳಲ್ಲಿ ಕರೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ದಿನಾಂಕ ನಿಗದಿ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ ಎಂದು ಸಚಿವ ಬಂಡೆಪ್ಪ ಕಾಶಂಪೂರ್ ಹೇಳಿದರು. ಫೆಬ್ರವರಿ ಮೊದಲ ವಾರದಲ್ಲಿ ಬಜೆಟ್ ಅಧಿವೇಶನವನ್ನು ಪ್ರತ್ಯೇಕವಾಗಿ ಕರೆಯಬೇಕೆಂಬ ಅಭಿಪ್ರಾಯ ಸಂಪುಟದಲ್ಲಿ ವ್ಯಕ್ತವಾಗಿರುವುದರಿಂದ ಜನವರಿಯಲ್ಲಿಯೇ ಜಂಟಿ ಅಧಿವೇಶನ ಕರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.