Advertisement

Belthangady ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

09:37 PM Sep 24, 2023 | Team Udayavani |

ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ವ್ಯಕ್ತಿಯೊಬ್ಬರ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ.

Advertisement

ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಮಂಜಲಪಳಿಕೆ ನಿವಾಸಿ ರಾಮಣ್ಣ ಗೌಡ (58) ಮೃತ ವ್ಯಕ್ತಿಯಾಗಿದ್ದಾರೆ. ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಮೇಲೆ ಮರ ಬಿದ್ದಿದೆ. ತೀವ್ರ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜವಾಗದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next