ಔರಾದ: ವ್ಯಕ್ತಿಯೊಬ್ಬ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್ ನ್ನು ತೆಗೆದುಕೊಂಡು ನಿಲ್ದಾಣದಿಂದ ಹೊರಗಿರುವ ಡಿವೈಡರ್ ಮೇಲೆ ಹತ್ತಿಸಿದ ಘಟನೆ ಬೀದರ್ ನ ಔರಾದ ಎಂಬಲ್ಲಿ ಜೂ.5 ನಡೆದಿದೆ.
ಯಶಪ್ಪ ಸೂರ್ಯವಂಶಿ ಎನ್ನುವ ವ್ಯಕ್ತಿ ಬೆಳಿಗ್ಗೆಯಿಂದ ನಿಲ್ದಾಣದಲ್ಲಿ ಕುಳಿತರೂ ತನ್ನೊರಿಗೆ ಹೋಗಲು ಬಸ್ ಇರಲಿಲ್ಲಾ, ಹೀಗಾಗಿ ಬಸ್ ತೆಗೆದುಕೊಂಡು ಹೋಗುತ್ತಿದ್ದೇನೆ ಎಂದರು.
ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರು ನಿಲ್ದಾಣದಲ್ಲಿ ಎಂಟ್ರಿ ಮಾಡಿಕೊಂಡು ಹೋಗಿ ಬರುವ ಸಮಯದಲ್ಲಿ ಈ ಘಟನೆ ನಡೆದಿದೆ.
ಯಶಪ್ಪ ಸೂರ್ಯವಂಶಿ ಎನ್ನುವ ವ್ಯಕ್ತಿ ಓಡಿ ಹೋಗುವಾಗ ಸಾರ್ವಜನಿಕರ ಸಹಾಯದಿಂದ ಎಎಸ್ಐ ಸುನೀಲ ಕುಮಾರ ಆತನನ್ನು ಹಿಡಿದು ತನ್ನ ಕಾರಿನಲ್ಲಿ ಔರಾದ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
Related Articles
ಯಶಪ್ಪ ಸೂರ್ಯವಂಶಿ ಇಟಂಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಸೋಮವಾರ ಗ್ರಾಮಕ್ಕೆ ತೆರಳಲು ಔರಾಗೆ ಬಂದಿದ್ದ ಸಂದರ್ಭ ಕುಡಿದ ಮತ್ತಿನಲ್ಲಿ ಈ ಘಟನೆ ನಡೆದಿದೆ ಎನ್ನುವುದು ಗ್ರಾಮಸ್ಥರ ಮಾತು.
ಕುಡಿದ ಮತ್ತಿನಲ್ಲಿ ಯಶಪ್ಪ ಈ ರೀತಿಯಾಗಿ ಮಾಡಿದ್ದು, ಬಸ್‌ನಲ್ಲಿರುವ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಈತ ಬಸ್ ನ್ನು ಕ್ಲೋಜರ ವಾಹನಕ್ಕೆ ಢಿಕ್ಕಿ ಹೊಡೆದು ನಂತರ ಡಿವೈಡರ್ ಮೇಲೆ ಹತ್ತಿಸಿದ್ದಾನೆ.
ಸ್ಥಳಕ್ಕೆ ಪಿಎಸ್ಐ ಮಡಿವಾಳಪ್ಪ ಭೇಟಿ ನೀಡಿ ಸಂಚಾರ ದಟ್ಟಣೆ ನಿವಾರಿಸಿದ್ದಾರೆ.