ವಿಜಯಪುರ : ದೀಪಾವಳಿ ಮಹಾಲಕ್ಷ್ಮೀ ಪೂಜೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಹಬ್ಬದ ಸಂಭ್ರಮಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆ ಬಬಲೇಶ್ವರ ಪಟ್ಟಣದಲ್ಲಿ ಸಿದ್ದರಾಯ ಆಡಿನ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ದೀಪಾವಳಿ ಅಮವಾಸ್ಯೆಯ ಮಹಾಲಕ್ಷ್ಮೀ ಪೂಜೆಯ ಬಳಿಕ ಸಿದರಾಯ ತನ್ನ ಬಳಿ ಇದ್ದ ಶಸ್ತ್ರಾಸ್ತ್ರ ಪರವಾನಿಗೆ ಇದ್ದ ಪಿಸ್ತೂಲ್-ವಿವಾಲ್ವಾರ ಮಾದರಿಯ ಶಸ್ತ್ರಾಸ್ತ್ರದಿಂದ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾನೆ.
ಸಿದರಾಯ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಶಸ್ತ್ರಾಸ್ತ್ರ ಪರವಾನಿಗೆ ಇದ್ದರೂ ಶಸ್ತ್ರಾಸ್ತ್ರ ಪ್ರದರ್ಶಿಸುವುದು, ಅನಗತ್ಯವಾಗಿ ಗಾಳಿಯಲ್ಲಿ ಗುಂಡು ಹಾರಿಸುವುದು, ಶಸ್ತ್ರಾಸ್ತ್ರ ಕಾಯ್ದೆ ಪ್ರಕಾರ ಅಪರಾಧವಾಗುತ್ತದೆ.
ಈ ಕುರಿತು ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿದೆ. ಬಬಲೇಶ್ವರ ಪೆÇಲೀಸ್ ಠಾಣಾ ವ್ಯಾಪ್ತಿ ಘಟನೆ ಜರುಗಿದ್ದು, ಸ್ಥಳೀಯ ಪೊಲೀಸರು ಕೈಗೊಂಡ ಕ್ರಮ ಏನು ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಈ ಕುರಿತು ಮಾಹಿತಿ ಪಡೆದ ಬಳಿಕ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಋಷಿಕೇಶ ಭಗವಾನ್ `ಉದಯವಾಣಿ’ಗೆ ತಿಳಿಸಿದ್ದಾರೆ.
ಇದನ್ನೂ ಓದಿ: KEA ಅಕ್ರಮ;ಕಲಬುರಗಿಯಲ್ಲಿ ಸಿಐಡಿ ಉನ್ನತ ಮಟ್ಟದ ತಂಡದಿಂದ ತನಿಖೆ ಶುರು