ವಿಟ್ಲ: ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ.
Advertisement
ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತಪಟ್ಟವರು.ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು. ಆದರೆ ಮಂಗಳವಾರಸೌದಿ ಅರೇಬಿಯಾದ ಬುರೈದದಲ್ಲಿ ಮೃತಪಟ್ಟಿದ್ದಾರೆ.
ಮಗನ ರೂಂನಲ್ಲಿ ಮಲಗಿದ್ದ ಹಸನಬ್ಬ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರು ಪತ್ನಿ ಮತ್ತು ಮಕ್ಕಳ ಜೊತೆ ಸೌದಿಗೆ ತೆರಳಿ ಉಮ್ರಾ ನಿರ್ವಹಿಸುವ ಉದ್ದೇಶವನ್ನು ಹೊಂದಿದ್ದರು. ಇದೀಗ ಅವರ ಅಕಾಲಿಕ ಮರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.