Advertisement

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

01:49 AM Oct 07, 2024 | Team Udayavani |

ಹೊಸದಿಲ್ಲಿ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಮೂತ್ರ ವಿಸರ್ಜಿಸದಂತೆ ವಿನಂತಿಸಿದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ದಿಲ್ಲಿಯಲ್ಲಿ ಶುಕ್ರವಾರ ನಡೆ ದಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋ ಪಿಯು ಮೂತ್ರ ವಿಸರ್ಜಿಸುವಾಗ ರಾಮ್‌ಪಾಲ್‌ ಎಂಬವರು ಅವರನ್ನು ತಡೆದಿದ್ದರು. ಹೀಗಾಗಿ ಕೋಪಗೊಂಡ ಆರೋಪಿ ಆರ್ಯನ್‌, ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಆಗಮಿಸಿ ಫ‌ುಟ್‌ಪಾತ್‌ನಲ್ಲಿ ಮಲಗಿದ್ದ ರಾಮ್‌ಪಾಲ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಹಲ್ಲೆ ನಡೆಸಿದಾತನನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next