Advertisement

ಹೆಣ್ಣೂರು-ಬಾಣಸವಾಡಿ ನಡು ರಸ್ತೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ: ವಿಡಿಯೋ ವೈರಲ್‌

10:05 AM Apr 03, 2024 | Team Udayavani |

ಬೆಂಗಳೂರು: ಹೆಣ್ಣೂರು-ಬಾಣಸವಾಡಿ ನಡುವಿನ ಹೊರ ವರ್ತುಲ ರಸ್ತೆಯಲ್ಲಿ  ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

Advertisement

ಮಾರ್ಚ್‌ 31ರಂದು ಹಲ್ಲೆ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಹಲ್ಲೆಯ ವಿಡಿಯೋ ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದೇ ದೃಶ್ಯವನ್ನು ವ್ಯಕ್ತಿಯೊಬ್ಬರು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಅದನ್ನು ಹಂಚಿಕೊಂಡಿರುವ ಹಲವರು, “ಬೆಂಗಳೂರಿನ ಜನರಿಗೆ ರಕ್ಷಣೆ ಇಲ್ಲದಂತಾಗಿದೆ. ದೃಶ್ಯ ನೋಡಿ ಆತಂಕ ಶುರುವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪೂರ್ವ ವಿಭಾಗದ ಡಿಸಿಪಿ ಕುಲದೀಪ್‌ ಕುಮಾರ್‌ ಜೈನ್‌, “ವಿಡಿಯೋ ಆಧರಿಸಿ ಮಾಹಿತಿ ಕಲೆಹಾಕಲಾಗುತ್ತಿದೆ. ಗಾಯಾಳು ಹಾಗೂ ಹಲ್ಲೆ ಮಾಡಿದವರು ಯಾರು? ಎಂಬುದನ್ನು ಪತ್ತೆ ಮಾಡಲಾಗುತ್ತಿದೆ. ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next