Advertisement
ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ 2023ರಲ್ಲಿ ಸ್ವಂತ ಅಕ್ಕನ ಮಗಳ(10) ಮೇಲೆಯೇ ಅತ್ಯಾಚಾರ ಎಸಗಿದ್ದನು. ದೋಷಿ ಗಣೇಶ ತನ್ನ ಅಕ್ಕನ ಬುದ್ಧಿಮಾಂದ್ಯ ಮಗಳು (ಬಾಲಕಿ) ರಜೆ ವೇಳೆ ಈತನ ಮನೆಗೆ ಬರುತ್ತಿದ್ದಳು. ಈ ವೇಳೆ ಆಕೆಯ ಮೇಲೆೆ ಪದೇ ಪದೆ ಅತ್ಯಾಚಾರ ಎಸಗಿದ್ದನು. ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು. ಈ ಸಂಬಂಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿ ಇನ್ಸ್ಪೆಕ್ಟರ್ ಎಸ್.ಆರ್.ಮಂಜುನಾಥ್ ಆರೋಪಿ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕ ಅನುರೇವು ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಎನ್.ನರಸಮ್ಮ ಅವರು ಸಾಕ್ಷಿ ಮತ್ತು ಪುರಾವೆಗಳನ್ನು ಅವಲೋಕಿಸಿದಾಗ ಅಪಾದನೆ ರುಜುವಾತಾಗಿರುತ್ತದೆ ಎಂದು ತೀರ್ಮಾನಿಸಿ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಅದೇಶ ನೀಡಿದ್ದಾರೆ.
Advertisement
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
10:51 AM Nov 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.