Advertisement
ಪಟ್ಟಣದ ಆಂಜನೇಯ ದೇವಾಲಯದ ಬಳಿ ಇರುವ ಸಮುದಾಯ ಭವನದಲ್ಲಿ ಖಾಸಗಿ ಆಸ್ಪತ್ರೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಏನೆಲ್ಲಾ ಆಸ್ತಿಯನ್ನು ಮಾಡದಿದ್ದರೂ, ಆರೋಗ್ಯ ಎಂಬ ಆಸ್ತಿಯನ್ನು ಉಳಿಸಿಕೊಳ್ಳುವುದು ಅವಶ್ಯಕ. ಪಟ್ಟಣದ ಹಾಗೂ ತಾಲೂಕಿನ ಎಲ್ಲಾ ಬಿಜೆಪಿ ಮುಖಂಡರ ಸಹಕಾರದೊಂದಿಗೆ ಶಿಬಿರ ಆಯೋಜಿಸಲಾಗಿದ್ದು, ಖಾಸಗಿ ಆಸ್ಪತ್ರೆ ಸಿಬ್ಬಂದಿ ಆಗಮಿಸಿ ತಪಾಸಣೆ ಮಾಡಿದ್ದಾರೆ ಎಂದರು.
Related Articles
Advertisement
ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಿ: ತಾಲೂಕು ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪುನೀತಾ ಮಾತನಾಡಿ, ಹೆಣ್ಣು ಯಾವುದರಲ್ಲೂ ಕಮ್ಮಿ ಇಲ್ಲ. ಎಲ್ಲದರಲ್ಲೂ ಸಮಾನಳು. ರಾಜಕೀಯ, ಸಾಮಾಜಿಕವಾಗಿ ಅನೇಕ ಮಹಿಳೆಯರು ಸಾಧನೆ ಮಾಡಿದ್ದಾರೆ. ಆದ್ದರಿಂದ, ಮಹಿಳೆಯರು ಯಾವುದೇ ರೋಗ ಬರದಂತೆ ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಿ. ಕೆಲವು ಬಾರಿ ಪ್ರಾಣ ಹಾನಿಯನ್ನು ಮಾಡಬಹುದು. ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ,ದೀನದಯಾಳ್ ಉಪಾಧ್ಯಾಯ ಹಾಗೂ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಸೇವಾ ಪಾಕ್ಷಿಕ ಆಚರಿಸಲಾಗುತ್ತಿದೆ ಎಂದರು. ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ, ತಾಲೂಕು ಅಧ್ಯಕ್ಷ ಸುಂದರೇಶ್, ಜಿಲ್ಲಾ ರೈತ ಮೋರ್ಚಾ ಎಚ್. ಎಂ. ರವಿಕುಮಾರ್, ಮಂಜುನಾಥ್, ಕನಕರಾಜು, ಎಸ್‌ಸಿ ಮೋರ್ಚಾದ ಚಂದ್ರಸಾಗರ್, ಕಾರ್ಯದರ್ಶಿ ನಾಗಮಣಿ, ತಾಲೂಕು ಅಧ್ಯಕ್ಷೆ ವಿಮಲಾ, ಕಾರ್ಯದರ್ಶಿ ದಾಕ್ಷಾಯಿಣಿ, ದೇವನಹಳ್ಳಿ ಟೌನ್ ಬಿಜೆಪಿ ಅಧ್ಯಕ್ಷ ಸಂದೀಪ್ ಪಟೇಲ್, ಪುರಸಭಾ ಸದಸ್ಯ ಬಾಂಬೆ ನಾರಾಯಣಸ್ವಾಮಿ ಹಾಗೂ ಮತ್ತಿತರರು ಇದ್ದರು.