ಬಂಟ್ವಾಳ: ಮನೆಯೊಂದರ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ ಪ್ರಕಾಶ್ ( 45) ಸಾವನ್ನಪ್ಪಿದ ವ್ಯಕ್ತಿ.
ಕೆಲಸ ಮಾಡುತ್ತಿದ್ದ ಸಂದರ್ಭ ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
ಅಮ್ಟಾಡಿ ಗ್ರಾ.ಪಂ.ಸದಸ್ಯನಾಗಿದ್ದ ಇವರು ಸಾಮಾಜಿಕವಾಗಿ ಉತ್ತಮ ಕೆಲಸಗಾರನಾಗಿದ್ದರು.
ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಗೆ ಇವರು ಸೇರಿ ಒಟ್ಟು ಮೂವರು ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು. ಆದರೆ ಏಕಾಏಕಿ ಕಾಂಕ್ರೀಟ್ ಹಲಗೆಗಳು ಮತ್ತು ಜಾಕ್ ಗಳು ಮುರಿದು ಬಿದ್ದ ಪರಿಣಾಮ ಇಬ್ಬರು ಕೆಳಗೆ ಹಾರಿದ್ದಾರೆ. ಪ್ರಕಾಶ್ ಮಾತ್ರ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಗಂಭೀರವಾಗಿ ಗಾಯಗೊಂಡಿದ್ದ ಪ್ರಕಾಶ್ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಉಳಿದಂತೆ ಇನ್ನಿಬ್ಬರು ಕೆಲಸಗಾರರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.