ತಿರುವನಂತರಪುರ: ರಾಜ್ಯ ಸರಕಾರಗಳು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳ ಸಚಿವರು ಕೇರಳ ರಾಜಧಾನಿ ತಿರುವನಂತಪುರದಲ್ಲಿ ಗುರುವಾರ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ 16ನೇ ಹಣಕಾಸು ಆಯೋಗಕ್ಕೆ ತಿಳಿಸಬೇಕಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ದಕ್ಷಿಣದ 4 ರಾಜ್ಯಗಳು ಹಾಗೂ ಪಂಜಾಬ್ ಸಹಿತ ಒಟ್ಟು 5 ರಾಜ್ಯಗಳು ಈ ಸಭೆಯಲ್ಲಿ ಭಾಗಿಯಾಗಲಿವೆ. ಕರ್ನಾಟಕದಿಂದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಪಾಲ್ಗೊಳ್ಳಲಿದ್ದಾರೆ.
ಜನಸಂಖ್ಯೆಯ ಆಧಾರದ ಮೇಲೆ ಅನುದಾನ ಹಂಚಿಕೆ ಮತ್ತು ಹವಾ ಮಾನ ಬದಲಾವಣೆಯಿಂದ ಉಂಟಾ ಗುವ ಪ್ರಾಕೃತಿಕ ವಿಕೋಪಗಳು ಹಾಗೂ ಮನುಷ್ಯ-ಪ್ರಾಣಿ ಸಂಘರ್ಷದ ವಿಷಯ ಗಳನ್ನು ಇಲ್ಲಿ ಚರ್ಚಿಸಲಾಗುತ್ತದೆ ಎನ್ನಲಾಗಿದೆ.
ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯ ಗಳನ್ನು ತಾರತಮ್ಯ ಭಾವನೆಯಿಂದ ನಡೆಸಿಕೊಳ್ಳಲಾಗುತ್ತದೆ ಎಂಬ ಆರೋಪದ ಕುರಿತಾಗಿ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ವಿಪಕ್ಷ ರಾಜ್ಯಗಳಿಂದ ಕೇರಳದಲ್ಲಿ ಸಭೆ ನಡೆಯುವ ಸಾಧ್ಯತೆಯ ಬಗ್ಗೆ ಉದಯವಾಣಿ ಸೆ. 7ರಂದೇ ವರದಿ ಮಾಡಿತ್ತು.