Advertisement

20ರ ಬಳಿಕ ಪೊಲೀಸ್‌ ಅಧಿಕಾರಿಗಳ ಸಭೆ

07:15 AM Dec 15, 2017 | Team Udayavani |

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಚ್ಚರಿಕೆ ವಹಿಸುವಂತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಮಾಜ ಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣದ ಮೂಲಕ ವದಂತಿ ಹಬ್ಬಿಸುವ ಸಾಧ್ಯತೆಗಳಿರುವುದರಿಂದ ಆ ಬಗ್ಗೆ ಎಚ್ಚರಿಕೆ ವಹಿಸಬೇಕು.ಆಯಾ ಜಿಲ್ಲೆಗಳಲ್ಲಿ ರೌಡಿ ಪಟ್ಟಿಯಲ್ಲಿರುವವರ ಚಲನವಲನಗಳ ಮೇಲೆ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ ಎಂದು ಹೇಳಲಾಗಿದೆ.

ಇದೇ ಸಂಬಂಧ ಡಿ.20ರ ನಂತರ ಬೆಂಗಳೂರಿನಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಈ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ,  ಇತ್ತೀಚಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.  ಈ ನಿಟ್ಟಿನಲ್ಲಿ ಪೊಲೀಸ್‌ ಅಧಿಕಾರಿಗಳಿಗೆ ಕೆಲವೊಂದು ಸೂಚನೆಗಳನ್ನು ನೀಡಬೇಕಿದೆ. ಡಿ.20 ರ ನಂತರ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next