Advertisement

Puttur ಅರಿಯಡ್ಕ ಗ್ರಾಮ ಪಂಚಾಯತ್‌ ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ

08:57 PM Dec 04, 2023 | Team Udayavani |

ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್‌ ಸದಸ್ಯ ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 3ರಂದು ಸಂಭವಿಸಿದೆ.

Advertisement

ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ, ಮಾಟ್ನೂರು ಗ್ರಾಮದ ಬಂಗ್ಲೆಗುಡ್ಡೆ ನಿವಾಸಿ ಶಂಕರ (41) ಆತ್ಮಹತ್ಯೆ ಮಾಡಿಕೊಂಡವರು. ಅವರು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಕೃತ್ಯ ಎಸಗಿದ್ದಾರೆ.

ಆತ್ಮಹತ್ಯೆಗೆ ಸಾಲಬಾಧೆ ಕಾರಣ ಎನ್ನಲಾಗಿದೆ. 2ನೇ ಬಾರಿಗೆ ಗ್ರಾಮ ಪಂಚಾಯತ್‌ ಸದಸ್ಯರಾಗಿ ಚುನಾಯಿತರಾಗಿದ್ದರು. ಈ ಹಿಂದೆ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ನೆಟ್ಟಣಿಗೆಮುಟ್ನೂರು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next