Advertisement

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಅಣಕು ಬೈಕ್‌ ಶವಯಾತ್ರೆ

03:22 PM Mar 31, 2022 | Niyatha Bhat |

ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರ ವಜಾಗೊಳಿಸುವಂತೆ ಒತ್ತಾಯಿಸಿ ಎನ್‌ ಎಸ್‌ಯುಐ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ಅಣಕು ಸ್ಕೂಟರ್‌ ಶವಯಾತ್ರೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

Advertisement

ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು. ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು ಆರೋಪಿಸಿದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇದ್ದಾಗಲೂ ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಮಾಡುವ ಬದಲು ಮನಸೋ ಇಚ್ಛೆ ಹೆಚ್ಚಳ ಮಾಡುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು ದೂರಿದರು.

ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಉಕ್ರೇನ್‌, ರಷ್ಯಾ ಯುದ್ಧದ ನೆಪದಲ್ಲಿ ಇಂಧನ ಬೆಲೆಯನ್ನು ಮತ್ತೆ ಹೆಚ್ಚಳ ಮಾಡಿದೆ. ಬೆಲೆಗಳನ್ನು ನಿಯಂತ್ರಿಸಿ ಜನಸಾಮಾನ್ಯರ ಬದುಕು ಸುಗಮವಾಗಿ ಮಾಡಬೇಕಿದ್ದ ಕೇಂದ್ರ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದ್ದು, ಕೂಡಲೇ ಜನ ವಿರೋಧಿ ಕೇಂದ್ರ ಸರ್ಕಾರವನ್ನು ವಜಾ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎನ್‌.ಎಸ್‌.ಯು.ಐ. ಜಿಲ್ಲಾಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್‌, ಗ್ರಾಮಾಂತರ ಅಧ್ಯಕ್ಷ ಹರ್ಷಿತ್‌, ರವಿ ಕಾಟಿಕೆರೆ ಹಾಗೂ ಯುವ ಕಾಂಗ್ರೆಸ್‌ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಚೇತನ್‌, ಯುವ ಮುಖಂಡ ಸಿ.ಜಿ. ಮಧುಸೂದನ್‌, ಅಲ್ಪಸಂಖ್ಯಾತ ಕಾಂಗ್ರೆಸ್‌ ನ ನಗರ ಅಧ್ಯಕ್ಷ ಮೊಹಮ್ಮದ್‌ ನಿಹಾಲ, ಚಂದ್ರೋಜಿ ರಾವ್‌, ರವಿ, ಕಿರಣ, ಸಾಗರ್‌, ಸುಹಾಸ, ಮಂಜು, ವಿಕ್ರಂ, ಭರತ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next