Advertisement

Dinesh babu; ಬರಲಿದೆ ಧರ್ಮಭೀರು ನಾಡಪ್ರಭು ಕೆಂಪೇಗೌಡರ ಕುರಿತ ಸಿನಿಮಾ

04:06 PM Apr 07, 2024 | Team Udayavani |

ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಕುರಿತು ಸಿನಿಮಾವೊಂದು ಬರುತ್ತಿದೆ. ಚಿತ್ರಕ್ಕೆ “ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಎಂದು ಟೈಟಲ್‌ ಇಡಲಾಗಿದೆ.

Advertisement

ಸಿಲಿಕಾನ್‌ ಸಿಟಿ, ಗಾರ್ಡನ್‌ ಸಿಟಿ ಅಂತೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರನ್ನು ಕಟ್ಟಿ ಬೆಳೆಸಿದ ನಾಡಪ್ರಭು ಕೆಂಪೇಗೌಡರ ಸಾಹಸ ಕಥೆಯನ್ನು ಸಿನಿಮಾ ರೂಪಕ್ಕೆ ಇಳಿಸುತ್ತಿರುವುದು ಹಿರಿಯ ನಿರ್ದೇಶಕ ನಿರ್ದೇಶಕ ದಿನೇಶ್‌ ಬಾಬು. ಜನಪ್ರಿಯ ನಟರೊಬ್ಬರು ಕೆಂಪೇಗೌಡ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ವೃತ್ತಿಯಲ್ಲಿ ವೈದ್ಯರಾಗಿರುವ ಕಿರಣ್‌ ತೋಟಂಬೈಲ್‌ ಸಿನಿಮಾ ಮೇಲಿನ ಪ್ರೀತಿಯಿಂದಾಗಿ ಈ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕೆಂಪೇಗೌಡ ಮೆಡಿಕಲ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗಲೇ ಮುಂದೊಂದು ದಿನ ಕೆಂಪೇಗೌಡರ ಸಿನಿಮಾ ಮಾಡಬೇಕು ಅಂದುಕೊಂಡಿದ್ದರಂತೆ. ಅದರಂತೆ ಇಂದು ಧರ್ಮಬೀರು ನಾಡಪ್ರಭು ಕೆಂಪೇಗೌಡರ ಸಿನಿಮಾ ನಿಮ್ಮ ಮುಂದೆ ತರಲು ಸಜ್ಜಾಗಿದ್ದಾರೆ.

ಧರ್ಮೇಂದ್ರ ಕುಮಾರ್‌ ಅರೇನಹಳ್ಳಿ ಕಥೆ ಬರೆದಿದ್ದು, ಸಂಕೇತ್‌ ಎಂವೈಎಸ್‌ ಈ ಸಿನಿಮಾಗೆ ಕ್ಯಾಮೆರಾ ಹಿಡಿಯುತ್ತಿದ್ದು, ಉಜ್ವಲ್‌ ಕುಲಕರ್ಣಿ ಸಂಕಲನ, ನಿರ್ಮಾಪಕರಾದ ಕಿರಣ್‌ ತೋಟಂಬೈಲ್‌ ಸಂಗೀತ ಒದಗಿಸುತ್ತಿದ್ದಾರೆ. ವಿ ನಾಗೇಂದ್ರ ಪ್ರಸಾದ್‌ ಹಾಗೂ ಸಂತೋಷ್‌ ನಾಯಕ್‌ ಸಾಹಿತ್ಯ ಹಾಡುಗಳಿಗಿದ್ದು, ಮಾಸ್ತಿ ಹಾಗೂ ರಘು ನಿಡುವಳ್ಳಿ ಸಂಭಾಷಣೆ ಧರ್ಮಬೀರು ನಾಡಪ್ರಭು ಕೆಂಪೇಗೌಡ ಚಿತ್ರಕ್ಕಿದೆ. ಕನ್ನಡ ಹಾಗೂ ಇಂಗ್ಲೀಷ್‌ ಭಾಷೆಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ಮೇ ಅಥವಾ ಜೂನ್‌ ತಿಂಗಳಲ್ಲಿ ಮುಹೂರ್ತ ನಡೆಯಲಿದೆ. ಮುಹೂರ್ತ ಮುಗಿಸಿಕೊಂಡು ಚಿತ್ರತಂಡ ಶೂಟಿಂಗ್‌ ಅಖಾಡಕ್ಕೆ ಇಳಿಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next