Advertisement
ಓಡಾಟ ಕಷ್ಟ: ಈ ರಸ್ತೆಯಲ್ಲಿ ಯುಜಿಡಿ ಕಾಮಗಾರಿ ಮಾಡಿ ತಿಂಗಳುಗಳೇ ಕಳೆದಿದ್ದರೂ ಇದು ವರೆಗೂ ರಸ್ತೆ ರಿಪೇರಿ ಮಾಡದ ಕಾರಣ ಕೆಸರುಗದ್ದೆಯಂತಾಗಿದೆ. ನೂರಾರು ವಾಹನ ಗಳು ಕೆಸರಿನಲ್ಲಿಯೆ ಓಡಾಡುವುದರಿಂದ ಗುಂಡಿಗಳು ಹೆಚ್ಚಾಗಿವೆ. ಅಲ್ಲದೆ ನಗರದ ಸಮೀಪಕ್ಕೆ ಸಂಪರ್ಕ ಹೊಂದಿರುವ ಹಳೇ ಪಾಳ್ಯ ರಸ್ತೆಯು ದೊಡ್ಡಯ್ಯನಪಾಳ್ಯ, ಆದಿ ಲಕ್ಷ್ಮೀನಗರ, ಹೊಸ ನಗರ, ಅಣ್ಣಾಪುರ, ಚಿಕ್ಕಲಕ್ಕಿಪಾಳ್ಯ, ಗಾಯತ್ರಿ ನಗರ, ಕಲ್ಕೆಳೆ, ಬಂಜಾರಹಟ್ಟಿ ಸೇರಿದಂತೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ, ಆರ್‌ಟಿಒ ಕಚೇರಿ, ಶಾಲಾ ಕಾಲೇಜುಗಳಿಗೆ ಸೇರಿದಂತೆ ಇನ್ನೂ ಹಲವು ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ.
Related Articles
Advertisement
ರಸ್ತೆ ಮೇಲೆಯೇ ಚರಂಡಿ ನೀರು: ಚೆನ್ನಾಗಿದ್ದ ರಸ್ತೆಯನ್ನು ನಗರಸಭೆಯವರು ಯುಜಿಡಿ ಕಾಮಗಾರಿಗೆ ರಸ್ತೆ ಮಧ್ಯಭಾಗದಲ್ಲಿಯೇ ದೊಡ್ಡ ಚರಂಡಿ ಅಗೆದು ಸಂಚಾರಕ್ಕೆ ತೊಂದರೆ ಮಾಡಿದ್ದಾರೆ. ಈ ರಸ್ತೆಯು ತುಂಬಾ ಕಿರಿದಾಗಿರುವುದರಿಂದಲೂ ವಾಹನ ಗಳು ಸುಗಮವಾಗಿ ಓಡಾಡಲು ಸಾಧ್ಯ ವಾಗುತ್ತಿಲ್ಲ. ಅಲ್ಲದೆ ಈ ಬಡಾವಣೆಗಳಲ್ಲಿ ಅಲ್ಲಲ್ಲಿ ಚರಂಡಿ ಕಟ್ಟಿಕೊಂಡಿರು ವುದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಇದರಲ್ಲೇ ವಾಹನಗಳು ಓಡಾಡುವಂತಾಗಿದೆ. ಹಳೇಪಾಳ್ಯ ಸೇರಿದಂತೆ ಈ ಎಲ್ಲಾ ಬಡ ಾಣೆ ಗಳಲ್ಲಿಯೂ ಇದೇ ಗೋಳಾಗಿದ್ದು, ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ. ಈ ಭಾಗದ ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಈಗ ಲಾದರೂ ನಗರಸಭೆ ಇತ್ತ ಗಮನಹರಿಸಿ ರಸ್ತೆ ದುರಸ್ತಿ ಗೊಳಿಸುವ ಮೂಲಕ ಮೂಲ ಸೌಕರ್ಯ ಒದಗಿಸಬೇಕು ಎಂದು ನಿವಾಸಿ ಗಳು ಮನವಿ ಮಾಡಿದ್ದಾರೆ.