Advertisement

KRS ಬೃಂದಾವನಕ್ಕೆ ಹೊಸ ರೂಪ; ಗಂಗಾ ಆರತಿಗಿಂತ ಮಿಗಿಲಾಗಿ ಕಾವೇರಿ ಆರತಿ

08:23 PM Jul 29, 2024 | Team Udayavani |

ಮಂಡ್ಯ : “ಬೃಂದಾವನ ಅಣೆಕಟ್ಟಿಗೆ ಮೈಸೂರು ಮಹಾರಾಜರು ಅದ್ಬುತವಾಗಿ ನಿರ್ಮಾಣ ಮಾಡಿದ್ದರು. ಗುಂಡೂರಾವ್ ಅವರು ಇದಕ್ಕೆ ಹೊಸರೂಪ ನೀಡಿದರು. ಪ್ರವಾಸೋದ್ಯಮವನ್ನು ಗುರಿಯಾಗಿಟ್ಟುಕೊಂಡು ಪಿಪಿಪಿ(Public Private Partnership) ಮಾದರಿಯಲ್ಲಿ ಹೊಸ ರೂಪ ನೀಡಲು ನಮ್ಮ ಸರ್ಕಾರ ಹೊರಟಿದೆ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Advertisement

ಸೋಮವಾರ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಬಾಗಿನ ಸಮರ್ಪಿಸಿದ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಡಿಸಿಎಂ ‘ಗಂಗಾ ಆರತಿಗಿಂತ ಮಿಗಿಲಾಗಿ ಪ್ರತಿವಾರ ಕಾವೇರಿ ಆರತಿ ಮಾಡಲಾಗುವುದು. ಈ ಕಾರ್ಯಕ್ರಮವನ್ನು ಆದಷ್ಟು ಬೇಗ ಪ್ರಾರಂಭ ಮಾಡಲಾಗುವುದು. ಈಗಾಗಲೇ ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಕಾವೇರಿ ಜಲಾನಯದ ಪ್ರದೇಶದ ಶಾಸಕರ ಹಾಗೂ ಸಂಬಂಧಪಟ್ಟ ಇಲಾಖೆಗಳನ್ನು ಸೇರಿಸಿ ಸಮಿತಿ ರಚಿಸಲಾಗಿದೆ” ಎಂದರು.

ರೈತರ ಜಮೀನನ್ನು ಒತ್ತಾಯ ಪೂರ್ವಕವಾಗಿ ವಶಪಡಿಸಿಕೊಳ್ಳುವುದಿಲ್ಲ

“ರೈತರು ಬೃಂದಾವನಕ್ಕೆ ಹೊಸ ರೂಪ ನೀಡುವ ಮೊದಲು ನಮ್ಮ ಜೊತೆ ಚರ್ಚೆ ನಡೆಸಿ ಎಂದು ಹೇಳಿದ್ದಾರೆ. ಯಾವುದೇ ಮುಚ್ಚುಮರೆಯಿಲ್ಲದೇ ಇದರ ಅಭಿವೃದ್ಧಿ ಮಾಡಲಾಗುವುದು ಹಾಗೂ ಅವರ ಜೊತೆ ಚರ್ಚೆ ನಡೆಸಲಾಗುವುದು. ಯಾರ ಜಮೀನು ವಶಪಡಿಸಿಕೊಳ್ಳುವುದಿಲ್ಲ. ಸರ್ಕಾರದ ಜಮೀನಿನಲ್ಲೇ ಅಭಿವೃದ್ಧಿ ಮಾಡಲಾಗುವುದು. ಇಷ್ಟವಿದ್ದವರು ಜಮೀನು ನೀಡಬಹುದು, ಯಾರಿಗೂ ಒತ್ತಾಯ ಮಾಡುವುದಿಲ್ಲ. ಅಣೆಕಟ್ಟಿನ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗುವುದು. ಸ್ಥಳೀಯ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರು ನೀರಾವರಿಗೆ ಸಂಬಂಧಿಸಿದಂತೆ ಅನೇಕ ಮನವಿಗಳನ್ನು ಸಲ್ಲಿಸಿದ್ದಾರೆ. ಅವರ ಮನವಿಗಳನ್ನು ಶೀಘ್ರ ಪರಿಗಣಿಸಲಾಗುವುದು” ಎಂದು ಹೇಳಿದರು.

Advertisement

ಪ್ರತಿವರ್ಷ ಐದು ಮಂದಿಗೆ ಪ್ರಶಸ್ತಿ

ಕಬಿನಿ, ಕೆಆರ್ ಎಸ್, ಹೇಮಾವತಿ ವಿಭಾಗದಲ್ಲಿ ಮೂರು ಜನ ರೈತರು ಹಾಗೂ ಒಬ್ಬ ಪ್ರಗತಿಪರ ರೈತ ಮತ್ತು ಕಿರಿಯ ಎಂಜಿನಿಯರ್ ಅವರಿಗೆ ಕಾವೇರಿ ನೀರಾವರಿ ನಿಗಮದಿಂದ ಪ್ರಶಸ್ತಿ ನೀಡಲಾಗುವುದು” ಎಂದು ತಿಳಿಸಿದರು.

ಆನಂತರ ರಾಜಕಾರಣ
ಬಾಗಿನ ಅರ್ಪಣೆಗೂ ಮುನ್ನ ಕೆಆರ್ ಎಸ್ ಅಣೆಕಟ್ಟಿನ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ “ಪ್ರಸ್ತುತ ಮಳೆ ಕಡಿಮೆಯಾಗಿದೆ. ಕಾವೇರಿ ನದಿ ತೀರದ ಪ್ರದೇಶಗಳ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ತಮಿಳುನಾಡಿದ ಸಿಎಂ ಅವರ ರಾಜ್ಯಗಳ ಕೆರೆಗಳನ್ನು ತುಂಬಿಸಲು ಸೂಚನೆ ನೀಡಿದ್ದಾರೆ. ನಾವು ನಮ್ಮ ರಾಜ್ಯದ ಕೆರೆಗಳನ್ನು ತುಂಬಿಸಲಾಗುತ್ತಿದೆ. ನಮ್ಮ ರೈತರನ್ನು ನಾವು ಕಾಪಾಡುತ್ತೇವೆ. ತಮಿಳುನಾಡಿಗೆ ಹಾಗೂ ನಮ್ಮ ರಾಜ್ಯಕ್ಕೆ ಒಳ್ಳೆಯದಾಗಲಿ. ಹೆಚ್ಚು ಕಾವೇರಿ ನೀರನ್ನು ಬಳಸಿಕೊಳ್ಳುವ ವಿಚಾರವಾಗಿ ಚರ್ಚೆ ನಡೆಸಬೇಕಾಗಿದೆ” ಎಂದರು.

ಬಿಜೆಪಿ- ಜೆಡಿಎಸ್ ಪಾದಯಾತ್ರೆ ವಿಚಾರವಾಗಿ ಕೇಳಿದಾಗ “ಮೊದಲು ಭೂತಾಯಿ ಮತ್ತು ವರುಣದೇವನಿಗೆ ಪೂಜೆ ಸಲ್ಲಿಸೋಣ. ಆನಂತರ ರಾಜಕಾರಣ ಮಾತನಾಡೋಣ” ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next