Advertisement
ಸೋಮವಾರ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಬಾಗಿನ ಸಮರ್ಪಿಸಿದ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಡಿಸಿಎಂ ‘ಗಂಗಾ ಆರತಿಗಿಂತ ಮಿಗಿಲಾಗಿ ಪ್ರತಿವಾರ ಕಾವೇರಿ ಆರತಿ ಮಾಡಲಾಗುವುದು. ಈ ಕಾರ್ಯಕ್ರಮವನ್ನು ಆದಷ್ಟು ಬೇಗ ಪ್ರಾರಂಭ ಮಾಡಲಾಗುವುದು. ಈಗಾಗಲೇ ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಕಾವೇರಿ ಜಲಾನಯದ ಪ್ರದೇಶದ ಶಾಸಕರ ಹಾಗೂ ಸಂಬಂಧಪಟ್ಟ ಇಲಾಖೆಗಳನ್ನು ಸೇರಿಸಿ ಸಮಿತಿ ರಚಿಸಲಾಗಿದೆ” ಎಂದರು.
Related Articles
Advertisement
ಬಾಗಿನ ಅರ್ಪಣೆಗೂ ಮುನ್ನ ಕೆಆರ್ ಎಸ್ ಅಣೆಕಟ್ಟಿನ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ “ಪ್ರಸ್ತುತ ಮಳೆ ಕಡಿಮೆಯಾಗಿದೆ. ಕಾವೇರಿ ನದಿ ತೀರದ ಪ್ರದೇಶಗಳ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ತಮಿಳುನಾಡಿದ ಸಿಎಂ ಅವರ ರಾಜ್ಯಗಳ ಕೆರೆಗಳನ್ನು ತುಂಬಿಸಲು ಸೂಚನೆ ನೀಡಿದ್ದಾರೆ. ನಾವು ನಮ್ಮ ರಾಜ್ಯದ ಕೆರೆಗಳನ್ನು ತುಂಬಿಸಲಾಗುತ್ತಿದೆ. ನಮ್ಮ ರೈತರನ್ನು ನಾವು ಕಾಪಾಡುತ್ತೇವೆ. ತಮಿಳುನಾಡಿಗೆ ಹಾಗೂ ನಮ್ಮ ರಾಜ್ಯಕ್ಕೆ ಒಳ್ಳೆಯದಾಗಲಿ. ಹೆಚ್ಚು ಕಾವೇರಿ ನೀರನ್ನು ಬಳಸಿಕೊಳ್ಳುವ ವಿಚಾರವಾಗಿ ಚರ್ಚೆ ನಡೆಸಬೇಕಾಗಿದೆ” ಎಂದರು. ಬಿಜೆಪಿ- ಜೆಡಿಎಸ್ ಪಾದಯಾತ್ರೆ ವಿಚಾರವಾಗಿ ಕೇಳಿದಾಗ “ಮೊದಲು ಭೂತಾಯಿ ಮತ್ತು ವರುಣದೇವನಿಗೆ ಪೂಜೆ ಸಲ್ಲಿಸೋಣ. ಆನಂತರ ರಾಜಕಾರಣ ಮಾತನಾಡೋಣ” ಎಂದು ಹೇಳಿದರು.