Advertisement
ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆಯ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಇಂದು (ಮಾರ್ಚ್ 4ರಂದು) ರೈಲು ಭವನದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು ಮಾರ್ಚ್ 9ರಂದು ಶನಿವಾರ ಸಾಯಂಕಾಲ 5 ಗಂಟೆಗೆ ಕಲಬುರಗಿ- ಬೆಂಗಳೂರು ನೂತನ ರೈಲು ಸಂಚಾರ ಶುಭಾರಂಭಗೊಳ್ಳಲಿದೆ ಎಂದು ಜಾಧವ್ ತಿಳಿಸಿದ್ದಾರೆ.
Related Articles
Advertisement
ಕಲಬುರಗಿ – ಬೈಯ್ಯಪ್ಪನಹಳ್ಳಿ ಮಧ್ಯೆ ಓಡಾಟ: ನೂತನ ಕಲಬುರ್ಗಿ – ಬೆಂಗಳೂರು ರೈಲು ಗಾಡಿಯು ಕಲಬುರ್ಗಿಯಿಂದ ಸಾಯಂಕಾಲ 5 ಗಂಟೆಗೆ ಹೊರಟು ಮರುದಿನ ಮುಂಜಾನೆ 4:15 ಗಂಟೆಗೆ ಬೆಂಗಳೂರು ಸಮೀಪದ ಬೈಯ್ಯಪ್ಪನಹಳ್ಳಿ ಅತ್ಯಾಧುನಿಕ ಮತ್ತು ಸುಸಜ್ಜಿತವಾಗಿ ನಿರ್ಮಾಣಗೊಂದಿರುವ ಸರ್.ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣಕ್ಕೆ ತಲುಪಲಿದೆ.
ಮಾರ್ಚ್ 9ರಂದು ಸಾಯಂಕಾಲ 5 ಗಂಟೆಗೆ ಕಲಬುರ್ಗಿಯಲ್ಲಿ ರೈಲು ಸಂಚಾರದ ಉದ್ಘಾಟನೆಯಾಗಲಿದ್ದು ಕಲಬುರಗಿ ವಿಭಾಗದ ಜನರು ಈ ಶುಭಾರಂಭ ಕಾರ್ಯಕ್ರಮವನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂದು ಜಾಧವ್ ಕರೆ ನೀಡಿದ್ದಾರೆ.
ವಚನ ಪಾಲನೆ -: ಸುಧೀರ್ಘ ಪ್ರಯತ್ನದ ಫಲವಾಗಿ ಕಲಬುರಗಿ ಲೋಕಸಭಾ ಕ್ಷೇತ್ರದ ಜನತೆಯ ದಶಕಗಳ ಕನಸು ಸಾಕಾರಗೊಳ್ಳುತ್ತಿದೆ. ಚುನಾವಣೆಯ ಸಂದರ್ಭದಲ್ಲಿ ನೀಡಿದ ಆಶ್ವಾಸನೆಗಳನ್ನು ಪ್ರಾಮಾಣಿಕವಾಗಿ ಒಂದೊಂದಾಗಿ ಈಡೇರಿಸುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಕ್ಷೇತ್ರದ ಜನರಿಗೆ ಕೊಟ್ಟ ಮಾತು ಉಳಿಸಿ ವಿಶ್ವಾಸವನ್ನು ಗಳಿಸಿರುವುದಕ್ಕೆ ಸಂತಸವಾಗುತ್ತಿದೆ. ಈ ಭಾಗದ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಖಾತೆಯ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಕ್ಷೇತ್ರದ ಜನತೆಯ ಪರವಾಗಿ ಅಭಿನಂದಿಸುವುದಾಗಿ ಸಂಸದ ಜಾಧವ್ ಹೇಳಿದ್ದಾರೆ.