Advertisement

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

12:59 PM Nov 30, 2024 | Team Udayavani |

ಮುಂಬಯಿ: ಮೊಬೈಲ್‌ ಆ್ಯಪ್‌ ಮೂಲಕ ಅಶ್ಲೀಲ ಚಿತ್ರಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಕೇಸಿನಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್‌ ಕುಂದ್ರಾ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಶುಕ್ರವಾರ(ನ.29) ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ಇದರ ಬೆನ್ನಲ್ಲೇ ರಾಜ್ ಕುಂದ್ರಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಶನಿವಾರ ಬೆಳಿಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ಗೆ ರಾಜ್ ಕುಂದ್ರಾ ಅವರು ಪೋಸ್ಟ್ ಹಾಕಿದ್ದು ಅದರಲ್ಲಿ ನನ್ನ ಮೇಲಿರುವ ಆರೋಪಗಳು ಶುದ್ಧ ಸುಳ್ಳು ಒಂದಲ್ಲಾ ಒಂದು ದಿನ ಸತ್ಯ ಹೊರಗೆ ಬಂದೇ ಬರುತ್ತದೆ ಆದರೆ ಸಂಬಂಧವಿಲ್ಲದ ವಿಚಾರದಲ್ಲಿ ನನ್ನ ಹೆಂಡತಿಯ ಹೆಸರನ್ನು ಪದೇ ಪದೇ ಎಳೆದು ತರಬೇಡಿ ಎಂದು ಹೇಳಿದ್ದಾರೆ. ನಾನು ಎಲ್ಲ ರೀತಿಯ ತನಿಖೆಗೂ ಸಹಕಾರ ನೀಡುತ್ತಿದ್ದೇನೆ ಆದರೆ ಮಾಧ್ಯಮಗಳು ನನ್ನ ಪತ್ನಿಯ ಹೆಸರನ್ನು ಎಳೆದು ತರುತ್ತಿವೆ ಎಂದು ಆರೋಪಿಸಿದ್ದಾರೆ. ನನ್ನ ಹೇಳಿಕೆ ಯಾರಿಗೆ ಅನ್ವಯವಾಗುತ್ತದೆ ಎಂದು ಸಂಬಂಧಪಟ್ಟವರೇ ಅರಿತುಕೊಳ್ಳಲಿ ಎಂದು ಹೇಳಿದ್ದಾರೆ.

ಅಷ್ಟು ಮಾತ್ರವಲ್ಲದೆ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ತನಿಖೆಗೆ ನಾನು ಸಹಕಾರ ನೀಡುತ್ತಿದ್ದೇನೆ ಎಲ್ಲೂ ತಲೆಮರೆಸಿಕೊಂಡಿಲ್ಲ ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂಬುದು ನನಗೆ ಗೊತ್ತಿದೆ ಆದರೆ ಕೊನೆಗೆ ಸತ್ಯ ಹೊರಗೆ ಬರಲೇ ಬೇಕು ಎಂದು ಹೇಳಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next