Advertisement
ಸ್ವಾತಂತ್ರ್ಯ ಉದ್ಯಾನ ಹೊರತುಪಡಿಸಿ ಬೆಂಗಳೂರಿನ ಬೇರೆ ಯಾವುದೇ ಭಾಗದಲ್ಲೂ ಯಾವುದೇ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಯದಂತೆ ಹೈಕೋರ್ಟ್ ಮಾ.3ರಂದು ಆದೇಶಿಸಿತ್ತು. ಈ ಆದೇಶದ ಮೇರೆಗೆ ಮೇ 1ರಂದು ನಗರದಲ್ಲಿ ಶಾಂತಿಯುತ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದನ್ನು ಆಕ್ಷೇಪಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದವು.
Related Articles
Advertisement
ಕಾರ್ಮಿಕ ದಿನಾಚರಣೆ ಅಂಗವಾಗಿ ಸಂಘಟನೆಗಳು ಅನುಮತಿ ಕೋರಿದ್ದ ಅರ್ಜಿ ವಜಾಕರಗ ಮೆರವಣಿಗೆ ಹೋಲಿಕೆ ಸರಿ ಅಲ್ಲ ವಿಚಾರಣೆ ವೇಳೆ ಅರ್ಜಿದಾರ ಸಂಘಟನೆಗಳ ಪರ ವಕೀಲರು, ಕರಗ ಮೆರವಣಿಗೆ ನಡೆಸಲು ಹೈಕೋರ್ಟ್ ಏ.13ರಂದು ಅನುಮತಿ ನೀಡಿತ್ತು. ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಇದೆ. ಆದ್ದರಿಂದ ಅರ್ಜಿದಾರರ ಸಂಘಟನೆಗಳ ಸದಸ್ಯರು ನಗರದ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಮತ್ತು ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್ ವರಗೆ ಶಾಂತಿಯುತ ಮೆರವಣಿಗೆ ನಡೆಸುತ್ತಾರೆ. ಬಳಿಕ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಸಭೆಗೆ ಹಾಜರಾಗುತ್ತಾರೆ. ಹಾಗಾಗಿ, ಮೆರವಣಿಗೆ ನಡೆಸಲು ಕಾರ್ಮಿಕರ ಸಂಘಟನೆಗಳಿಗೂ ಅನುಮತಿ ನೀಡಬೇಕು ಎಂದು ಕೋರಿದರು.
ಇದನ್ನು ಆಕ್ಷೇಪಿಸಿದ ಸರ್ಕಾರಿ ವಕೀಲರು, ಕರಗ ಉತ್ಸವ ಹಿನ್ನೆಲೆಯನ್ನು ಪರಿಗಣಿಸಿ ಮೆರವಣಿಗೆ ನಡೆಸಲು ಹೈಕೋರ್ಟ್ ಅನುಮತಿ ನೀಡಿತ್ತು. ಮುಖ್ಯವಾಗಿ ಕರಗ ಮೆರವಣಿಗೆ ರಾತ್ರಿವೇಳೆ ನಡೆಯುತ್ತದೆ. ಆದರೆ, ಆ ಕರಗ ಮೆರವಣಿಗೆಗೆ ಕಾರ್ಮಿಕ ದಿನಾಚರಣೆ ಅಂಗವಾಗಿ ನಡೆಸಲು ಉದ್ದೇಶಿಸಿರುವ ಮೆರವಣಿಗೆಯನ್ನು ಹೋಲಿಸಲು ಆಗುವುದಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.