ಬೆಂಗಳೂರು:ಚುನಾವಣೆ ಪ್ರಚಾರದಲ್ಲಿ ನೀಡಿದ ಗ್ಯಾರಂಟಿಗಳ ಬಗ್ಗೆ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಆದೇಶ ಹೊರಡಿಸಿದ ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿ ಹಾಗೂ ಇದಕ್ಕೆ ಕಾರಣರಾದ ಪಕ್ಷದ ನಾಯಕರಿಗೆ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅಭಿನಂದನೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷವಾಗಿದೆ. ಮಾತಿಗೆ ಬದ್ಧವಾಗಿರುವ ಪಕ್ಷ ನಮ್ಮದಾಗಿದ್ದರಿಂದ ಚುನಾವಣಾ ಸಂದರ್ಭದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದರು.
ಈಗ ಅದರಂತೆಯೇ ನಡೆದುಕೊಳ್ಳಲಾಗಿದೆ. ರಾಜ್ಯದ ಜನತೆಗೆ ನೀಡಿದ್ದ ವಾಗ್ಧಾನ ಈಡೇರಿಸಿದ್ದು ಇದು ಅಭಿನಂದನಾರ್ಹ ಎಂದು ಹೇಳಿದ್ದಾರೆ.
Related Articles