Advertisement

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

10:34 AM Jun 17, 2023 | Team Udayavani |

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ವಿದೇಶದಿಂದ ಹಿಂತಿರುಗಿ, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ.

Advertisement

ಇರ್ಷಾದ್ ಉಮರ್( 33)ಮೃತ ಯುವಕ. ಇವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು.

ಅವರನ್ನು ಆಸ್ಪತ್ರಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರಕ್ತದ ಅವಶ್ಯಕತೆ ಇದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ‌ ಸಂದೇಶ ರವಾನಿಸಿ ರಕ್ತ ಸಂಗ್ರಹಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next