Advertisement

Ullal ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿ

09:47 PM Sep 24, 2023 | Team Udayavani |

ಉಳ್ಳಾಲ: ಟಯರ್‌ ಸಿಡಿದು ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಸಂಜೆ ವೇಳೆ ನಡೆದಿದೆ.

Advertisement

ಘಟನೆಯಲ್ಲಿ ಯಾವುದೇ ಗಾಯವಾಗದೇ ರಸ್ತೆ ಸಂಚಾರದಲ್ಲಿ ವ್ಯತ್ಯಾಸ ಉಂಟಾಯಿತು. ಮಲ್ಪೆ ಬಂದರಿನಿಂದ ಉಳ್ಳಾಲ ಆಯಿಲ್‌ ಮಿಲ್‌ ಗೆ ಮೀನು ಸಾಗಾಟ ನಡೆಸುವ ವಾಹನ, ನೇತ್ರಾವತಿ ಸೇತುವೆ ತಲುಪುತ್ತಿದ್ದಂತೆ ಎದುರುಗಡೆಯ ಟಯರ್‌ ಸಿಡಿದಿದೆ.

ಪರಿಣಾಮ ಒಂದು  ಕ್ಕಿನತ್ತ ತೆರಳಿದ ಪಿಕಪ್‌ ವಾಹನ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಸಂಚಾರದಲ್ಲಿ ವ್ಯತ್ಯಾಸ ಉಂಟಾದ ವಾಹನಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಘಟನೆಯಲ್ಲಿ ಪಿಕಪ್‌ ವಾಹನ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ವಾಹನದಲ್ಲಿದ್ದ ಮೀನು ರಸ್ತೆ ಪೂರ್ತಿ ಚೆಲ್ಲಿಹೋಗಿದೆ.

Advertisement

Udayavani is now on Telegram. Click here to join our channel and stay updated with the latest news.

Next