Advertisement
ಡಿನ್ನರ್ ಪಾರ್ಟಿಯಿಂದ ಹೊರ ಬಂದು ಬರ ಪರಿಸ್ಥಿತಿ ನೋಡಲಿಚಿಕ್ಕಬಳ್ಳಾಪುರ/ಶಿಡ್ಲಘಟ್ಟ/ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರೇಕ್‌ಫಾಸ್ಟ್ ಹಾಗೂ ಡಿನ್ನರ್ ಪಾರ್ಟಿಯಿಂದ ಹೊರ ಬಂದು ರಾಜ್ಯದ ಬರ ಪರಿಸ್ಥಿತಿ ನೋಡಲಿ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದರು.
Related Articles
Advertisement
ರಾಜ್ಯದ ಖಜಾನೆ ಕೀ ಸುರ್ಜೇವಾಲ ಕೈಯಲ್ಲಿರಾಜ್ಯದ ಖಜಾನೆ ಕೀ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುಜೇìವಾಲ ಹಾಗೂ ವೇಣುಗೋಪಾಲ್ ಕೈಗೆ ಕೊಟ್ಟಿದ್ದಾರೆ ಎಂದು ಸಿ.ಟಿ.ರವಿ ರಾಜ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಕೋಲಾರ ಜಿಲ್ಲೆಯ ಬರ ಪರಿಸ್ಥಿತಿ ವೀಕ್ಷಣೆಗೆ ಆಗಮಿಸಿದ್ದ ಬಿಜೆಪಿ ತಂಡದ ನೇತೃತ್ವ ವಹಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಜನ ಬರ ಸಂಕಷ್ಟದಿಂದ ಕಂಗೆಟ್ಟಿದ್ದರೆ ಸರಕಾರ ಇಲ್ಲಿನ ಜನರನ್ನು ದೋಚಿ ಬೇರೆ ರಾಜ್ಯಗಳ ಚುನಾವಣೆಗೆ ಖರ್ಚು ಮಾಡಲು ಮುಂದಾಗಿದೆ, ಮುಖ್ಯಮಂತ್ರಿ ಮನೆ ಪೀಠೊಪಕರಣ ಖರೀದಿಗೆ 3 ಕೋಟಿ ಖರ್ಚು ಮಾಡಿದ್ದಾರೆ ಎಂದು ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಬಿಜೆಪಿಯವರು ಪ್ರಧಾನಿ ಮೋದಿಗೆ ರಾಜ್ಯದ ಕಷ್ಟ ಮನವರಿಕೆ ಮಾಡಲಿ
ದಾವಣಗೆರೆ: ಬಿಜೆಪಿಯವರು ಬರ ಅಧ್ಯಯನ ಪ್ರವಾಸ ಮಾಡುವುದನ್ನು ಬಿಟ್ಟು ಪ್ರಧಾನಿ ಮೋದಿ ಬಳಿ ಹೋಗಿ ರಾಜ್ಯದ ಕಷ್ಟದ ಬಗ್ಗೆ ಹೇಳಲಿ. ಅಗತ್ಯ ಇರುವ ಅನುದಾನ ತರಲಿ ಎಂದು ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಅದೇ ಕಾರಣಕ್ಕೆ ಬರ ಅಧ್ಯಯನ ಸಹಿತ ಹತ್ತಾರು ಪ್ರವಾಸ ಮಾಡುತ್ತಿದ್ದಾರೆ. ಬಿಜೆಪಿಯವರು ಪ್ರಧಾನಿ ಬಳಿ ಹೋಗಿ ಮಂಡಿಯೂರಿ ಕುಳಿತುಕೊಳ್ಳುವುದನ್ನು ಬಿಟ್ಟು ಧೈರ್ಯದಿಂದ ಮಾತನಾಡಿ ಅನುದಾನ ತರಲಿ. ನಮ್ಮ ಕಾಂಗ್ರೆಸ್ ಕುಟುಂಬದವರು ಚೆನ್ನಾಗಿದ್ದೇವೆ. ಬಿಜೆಪಿ, ಜೆಡಿಎಸ್ ಅವರಿಗೇಕೆ ನಮ್ಮ ಚಿಂತೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಾಲಿಶತನದಿಂದ ಕೂಡಿದೆ. ಕಾಂಗ್ರೆಸ್ ಎಂದರೆ ಒಂದು ಕುಟುಂಬ ಇದ್ದಂತೆ. ನಮ್ಮ ಸಮಸ್ಯೆ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದರು. ಹಂಪಿಯಲ್ಲಿ ಸಿಎಂ ಸಿದ್ದರಾಮಯ್ಯ ಚೆನ್ನಾಗಿ ನೃತ್ಯ ಮಾಡಿದ್ದು, ಅದನ್ನು ತಪ್ಪು ಎನ್ನುವುದಿಲ್ಲ. ಆದರೆ ಸಮಯ ಎಂತಹುದು ಎಂದು ಸಿ.ಟಿ.ರವಿ ಪ್ರಶ್ನಿಸಿದರು. ಇವರೇ 213 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದಾರೆ. ಹಂಪಿಗೆ ಹೋದರೂ ಬರ ಅಧ್ಯಯನ ಮಾಡಲಿಲ್ಲ. ಒಂದು ಜನಪರ ಸರಕಾರ ಹಾಗೂ ಮಾನವೀಯ ಸರಕಾರ ಹೇಗೆ ನಡೆದುಕೊಳ್ಳಬೇಕೋ ಹಾಗೆ ನಡೆದುಕೊಳ್ಳದಿರುವುದು ದುರಂತ.
-ಸಿ.ಟಿ.ರವಿ, ಮಾಜಿ ಸಚಿವ ಜೆಡಿಎಸ್‌ನವರು ಕೇಂದ್ರದ ಮೇಲೂ ಒತ್ತಡ ತರಲಿ
ಬೆಂಗಳೂರು: ನಾಡಿನ ಬರಪರಿಸ್ಥಿತಿ ವೀಕ್ಷಣೆಗೆ ರೈತ ಸಾಂತ್ವನ ಯಾತ್ರೆ ಕೈಗೊಳ್ಳುವ ಜಾತ್ಯತೀತ ಜನತಾ ದಳದ ನಿಲುವನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಒಂದು ಜವಾಬ್ದಾರಿಯುತ ವಿಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ಬಳಿಕ ಅವರು ಕೊಡುವ ವರದಿಯನ್ನು ನಮ್ಮ ಸರಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದಿದ್ದಾರೆ. ಈ ಕುರಿತು ಪ್ರಕಟನೆ ನೀಡಿರುವ ಅವರು, ರೈತ ಸಾಂತ್ವನ ಯಾತ್ರೆಯ ಬಳಿಕ ತಮ್ಮ ಅನು ಭವವನ್ನು ರಾಜ್ಯ ಸರಕಾರದ ಜತೆಯಲ್ಲಿ ಮಾತ್ರವಲ್ಲ, ಕೇಂದ್ರ ಸರಕಾರದ ಜತೆಗೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾ ಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥ ರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ. ಹೊಸ ಬೆಳವಣಿಗೆಯಲ್ಲಿ ಕುಮಾರಸ್ವಾಮಿ ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜತೆ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜತೆ ಆತ್ಮೀಯ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ. ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು 33,710 ಕೋಟಿ ರೂ. ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸಹಿತ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಸರಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ. ಬರ ಪರಿಹಾರಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಮನವಿ ಮಾಡಲು ನಮ್ಮ ಸರಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿ ಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಎಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದಿದ್ದಾರೆ.