ಕಲಬುರಗಿ: ಕೇಂದ್ರ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಅಂಗವಾಗಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು.
ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಂಪಿಎಂಸಿ ತಿದ್ದುಪಡಿ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಗಳ ಸುಗ್ರೀವಾಜ್ಞೆಯನ್ನ ಕೈಬಿಡಬೇಕು. ವಿದ್ಯುತ್, ರೈಲ್ವೆ ಕ್ಷೇತ್ರಗಳ ಖಾಸಗೀಕರಣ ನಿಲ್ಲಿಸಬೇಕೆಂದು ಆಗ್ರಹಿಸಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.
ಪ್ರತಿಭಟನೆಯುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದೆ. ರೈತರು, ಕಾರ್ಮಿಕರಿಗೆ ಮರಣ ಶಾಸನವಾಗುವಂತಹ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಫ್ರೂಟ್ ಇರ್ಫಾನ್ ಕೊಲೆ ಆರೋಪಿ ಸೆರೆ : ದಯಾನಾಯಕ್ ನೇತೃತ್ವದ ತಂಡದಿಂದ ಕಾರ್ಯಾಚರಣೆ
ಪ್ರತಿಭಟನೆಯಲ್ಲಿ ಎಸ್ ಎಫ್ ಐ, ಎಐಡಿಎಸ್ಓ, ಸಿಐಟಿಯು, ಎಐಟಿಯುಸಿ ಅಖಿಲ ಭಾರತ ಜನವಾದಿ ಸಂಘಟನೆ, ಉದ್ಯೋಗ ಖಾತ್ರಿ ಕಾಯಕ ಜೀವಿಗಳ ಸಂಘಟನೆಯ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇದನ್ನೂ ಓದಿ: ನಿವಾರ್ ಚಂಡಮಾರುತದ ಅಬ್ಬರ: ಚೆನ್ನೈ,ಪಾಂಡಿಚೇರಿಯಲ್ಲಿ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ