Advertisement

ಸಮನ್ವಯ ಸಮಿತಿಯಲ್ಲಿ ವಿಶ್ವನಾಥ ಸೇರ್ಪಡೆ ಕುರಿತು ಶೀಘ್ರವೇ ನಿರ್ಧಾರ

06:00 AM Aug 29, 2018 | Team Udayavani |

ಬಾಗಲಕೋಟೆ: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ಶೀಘ್ರವೇ ನಡೆಯಲಿದೆ. ಈ ಸಮಿತಿಯಲ್ಲಿ ಯಾರ್ಯಾರು ಇರಬೇಕು ಎಂಬುದನ್ನು ಎರಡೂ ಪಕ್ಷಗಳ ವರಿಷ್ಠರು ನಿರ್ಧರಿಸುತ್ತಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ವಿಶ್ವನಾಥ ಅವರು ತಾವೂ ಇರಬೇಕೆಂದು ಬಯಸಿದ್ದಾರೆ. ಸಮಿತಿಯಲ್ಲಿ ಯಾರ್ಯಾರು ಇರಬೇಕು ಎಂಬುದರ ಕುರಿತು ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ವರಿಷ್ಠರು ಕುಳಿತು ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. 
ಸಮ್ಮಿಶ್ರ ಸರ್ಕಾರ ಅಂದಾಗ ಸಣ್ಣ ಪುಟ್ಟ ವಿಚಾರಗಳು ಇರುತ್ತವೆ. ಅದು ಸಹಜ. ಎಲ್ಲರಿಗೂ ಸ್ವಾತಂತ್ರ್ಯವಿದೆ. ಅವರವರು ಅವರ ಅಭಿಪ್ರಾಯ ಹೇಳಿಕೊಳ್ಳುತ್ತಾರೆ ಎಂದರು.

Advertisement

ನ್ಯಾಯಸಮ್ಮತ ಹಾದಿಗೆ ಜಯ
ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಅವರ ಮೇಲಿನ ರಾಚೇನಹಳ್ಳಿ ಡಿ ನೋಟಿಫಿಕೇಷನ್‌ ಸೇರಿ 15 ಪ್ರಕರಣಗಳನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿರುವುದು ಸ್ವಾಗತಾರ್ಹ ಎಂದು ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಯಡಿಯೂರಪ್ಪ ವಿರುದ್ಧ ಅವರ ವಿರೋಧಿಗಳು ಸುಖಾಸುಮ್ಮನೆ ಆರೋಪಗಳನ್ನು ಮಾಡಿ ಅವರ ಘನತೆಗೆ ಧಕ್ಕೆ ತರುವುದನ್ನೇ ಕಾಯಕವನ್ನಾಗಿಸಿಕೊಂಡಿದ್ದರು. ಚುನಾವಣಾ ಸಂದರ್ಭವಷ್ಟೇ ಅಲ್ಲದೆ ಅನೇಕ ಬಾರಿ ಭ್ರಷ್ಟಾಚಾರದ ಆರೋಪ ಮಾಡಿ ತೇಜೋವಧೆ ಮಾಡಿದ್ದರು.
ಈಗ ಅವರು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ. ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ಅವರ ಸತ್ಯ, ಧರ್ಮ, ನ್ಯಾಯಸಮ್ಮತ ಹಾದಿಗೆ ಸಿಕ್ಕ ಜಯವಾಗಿದ್ದು ವಿರೋಧಿಗಳಿಗೆ ಕಪಾಳ ಮೋಕ್ಷ ಮಾಡಿದಂತಾಗಿದೆ ಎಂದೂ ಹೇಳಿದ್ದಾರೆ.

ಕಾಂಗ್ರೆಸ್‌ನ ಯಾರೊಬ್ಬರೂ ಬಿಜೆಪಿ ಸೇರುವುದಿಲ್ಲ. ಅವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬಿಜೆಪಿಯ ಹಲವರು ಕಾಂಗ್ರೆಸ್‌ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಯಾರು ಎಂಬುದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ.
● ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next