Advertisement

ಐದು ದಿನ ರಾಷ್ಟ್ರಧ್ವಜ ಹಾರಿಸಲು ಮನವಿ

02:48 PM Aug 07, 2022 | Team Udayavani |

ಕಲಬುರಗಿ: ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆ. 12ರಿಂದ ಆ. 16ರ ವರೆಗೆ ಸಾರ್ವಜನಿಕರು ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ, ಗೌರವ ಸಲ್ಲಿಸಬೇಕೆಂದು ಗ್ರಾಮೀಣ ಮತ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಕಾರ್ಯಕರ್ತರಿಗೆ ಕರೆ ನೀಡಿದರು.

Advertisement

ಶನಿವಾರ ನಗರದ ಖಾಸಗಿ ಹೊಟೇಲ್‌ದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕರೆಯಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ “ಹರ ಘರ್‌ ತಿರಂಗಾ’ ಆಚರಿಸುತ್ತಿರುವ ನಿಮಿತ್ತ ರಾಷ್ಟ್ರ ಧ್ವಜಗಳನ್ನು ಗ್ರಾಮೀಣ ಮಂಡಲ ವತಿಯಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಹಾಗೂ ಶಹಾಬಾದ ಮಂಡಲ ಪದಾ ಧಿಕಾರಿಗಳಿಗೆ ರಾಷ್ಟ್ರಧ್ವಜ ವಿತರಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್‌ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಬಗಲಿ, ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ಶಹಾಬಾದ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಪ್ರಧಾನ ಕಾರ್ಯದರ್ಶಿ, ಜಗನ್ನಾಥ ಮಾಲಿ ಪಾಟೀಲ, ಪ್ರವೀಣ ಮುಚ್ಚಟ್ಟಿ, ರಾಜಕುಮಾರ ಕೋಟೆ, ಹರ್ಷವರ್ಧನ್‌ ಗೂಗಳೆ ಮುಂತಾದವರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next