Advertisement

Budget; ಬೆಂಗಳೂರು ಸಮೀಪ ಸಂಶೋಧನಾ ನಗರ

11:20 PM Feb 16, 2024 | Team Udayavani |

ಬೆಂಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಜ್ಞಾನ ಆರೋಗ್ಯ ಕಾಳಜಿ, ನಾವೀನ್ಯತೆ ಮತ್ತು ಸಂಶೋಧನಾ ನಗರ (ಕೆಎಚ್‌ಐಆರ್‌ಖೀರ್‌) ಅಭಿವೃದ್ಧಿ ಪಡಿಸಲು ಸರ್ಕಾರ ಚಿಂತನೆ ನಡೆಸಿದೆ.

Advertisement

ಕೆಎಚ್‌ಐಆರ್‌ನಿಂದ ಅಂದಾಜು 40,000 ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದ್ದು ಸುಮಾರು 80,000 ಜನರಿಗೆ ಉದ್ಯೋಗ ದೊರೆ ಯುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಹೇಳಿದ್ದಾರೆ.

ಗ್ರಾಮಾಂತರ ಪ್ರದೇಶಗಳಿಗೆ ಎಂಎಸ್‌ಐಎಲ್ ವತಿಯಿಂದ ಚಿಟ್‌ಫಂಡ್ , ಕೈಗಾರಿಕಾ ವಸಾಹತು ಗಳನ್ನು ಕೇಂದ್ರ ಸರ್ಕಾರದ ಸಹಯೋಗದಲ್ಲಿ 39 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕರ್ನಾಟಕ ಸಣ್ಣ  ಪ್ರಮಾಣದ ಕೈಗಾರಿಕೆಗಳ ನಿಗಮದ ಮೂಲಕ ಮೇಲ್ದರ್ಜೆಗೇರಿಸವುದು, ಯಶವಂತ ಪುರದಲ್ಲಿ ಕೆ.ಎಸ್‌.ಡಿ.ಎಲ್‌ ವತಿಯಿಂದ ವಿವಿಧ ಸರ್ಕಾರಿ ಇಲಾ ಖೆಗ ‌ಳನ್ನು ನಿರ್ವಹಿಸಲು ಸುಸಜ್ಜಿತ ಕಚೇರಿ ಸಂಕೀರ್ಣ ನಿರ್ಮಿಸುವ ಘೋಷಣೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾ ರಗಳ ಜಂಟಿ ಸಹಭಾಗಿತ್ವದಲ್ಲಿ ಬೆಂಗಳೂರು- ಮುಂಬಯಿ ಎಕನಾಮಿಕ್‌ ಕಾರಿಡಾರ್‌ ಯೋಜ ನೆಯಡಿ ಧಾರವಾಡ ಸಮೀಪ ಸುಮಾರು  6,000 ಎಕರೆ ಜಮೀನಿನಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಒತ್ತು ನೀಡುವ ಸಂಬಂಧ ಕೈಗಾರಿಕಾ ನೋಡ್‌ ಅಭಿವೃದ್ಧಿಪಡಿಸುವ ಮೂಲಕ ಉತ್ತರ ಕರ್ನಾಟಕದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಾಗೂ ಆರ್ಥಿಕ ಬೆಳವಣಿಗೆಗಳಿಗೆ ಉತ್ತೇಜನ ನೀಡುವ ತೀರ್ಮಾನವನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಐಪಿಒಗೆ ಸಹಾಯಧನ: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸ್ಟಾಕ್‌ ಎಕ್ಸ್‌ಚೆಂಜ್‌ಗಳಲ್ಲಿ ಐಪಿಓ (ಇನ್ಷಿಯಲ್‌ ಪಬ್ಲಿಕ್‌ ಆಫ‌ರ್‌) ಬಿಡುಗಡೆ ಮಾಡಲು ತಗಲುವ ವೆಚ್ಚದಲ್ಲಿ ಗರಿಷ್ಠ ಮಿತಿ 25 ಲಕ್ಷ ರೂ. ಗಳಿಗೆ ಒಳಪಟ್ಟು ಶೇ.50 ರಷ್ಟು ಸಹಾಯಧನ ನೀಡುವ ವಿನೂತನ ಕ್ರಮವನ್ನು ಪ್ರಕಟಿಸಲಾಗಿದೆ.

ಎಲ್ಲಾ ಉಪ ಖನಿಜಗಳ ಅನಧಿಕೃತ ಗಣಿಗಾರಿಕೆಯನ್ನು ನಿಯಂತ್ರಿಸುವ ಜೊತೆಗೆ ಸಂಪೂರ್ಣ ಖನಿಜ ಬಳಕೆ ಪ್ರಮಾಣವನ್ನು ಡ್ರೋನ್‌ ಸರ್ವೆ ಮೂಲಕ ವೈಜ್ಞಾನಿಕವಾಗಿ ಅಂದಾಜಿಸುವ ವ್ಯವಸ್ಥೆಯನ್ನು ರಾಜ್ಯಾದ್ಯಂತ ಅನುಷ್ಠಾನಗೊಳಿಸಿ, ರಾಜಸ್ವ ಸಂಗ್ರಹಣೆಯನ್ನು ಹೆಚ್ಚಿಸುವ ಪ್ರಯತ್ನ ನಡೆಸಲಾಗುವುದು, ಎಲ್ಲಾ ಗೊಂದಲಗಳನ್ನು ನಿವಾರಿಸಿ ಹೊಸ ಮರಳು ನೀತಿ-2020ಯನ್ನು ಜಾರಿ ಗೊಳಿಸಿ ಸುಲಭವಾಗಿ ಹಾಗೂ ಯೋಗ್ಯ ದರದಲ್ಲಿ ಮರಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಲ್ಲೇಖೀಸಲಾಗಿದೆ.

Advertisement

ಮೈ ಷುಗರ್‌ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ
ಮಂಡ್ಯದ ಮೈಶುಗರ್‌ ಕಾರ್ಖಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆಯನ್ನು ನಿರ್ಮಿಸಲಾಗುವುದು. ಸರ್ಕಾರದ ಅನುದಾನ, ಇತರೆ ಮೂಲಗಳು ಹಾಗೂ ಕಾರ್ಖಾನೆಯ ಆಸ್ತಿಗಳಿಂದ ಹಣ ಸಂಗ್ರಹದ ಮೂಲಕ ಮೂಲಕ ಸಂಪನ್ಮೂಲವನ್ನು ಕ್ರೋಢೀಕರಿಸಲಾಗುವುದು ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸ್ಟ್ಟೈಲ್‌ ಪಾರ್ಕ್‌ ಸ್ಥಾಪನೆ. ಮೂಲ ಸೌಕರ್ಯ ಕ್ಕಾಗಿ 50 ಕೋಟಿ ರೂ.ಗಳ ಅನುದಾನ
ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ (ರಾಯಚೂರು) ಮತ್ತು ಮೈಸೂರು ವಿಭಾಗಗಳಲ್ಲಿ ನೂತನ ಜವಳಿ ಪಾಕ್‌ಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ.

Advertisement

Udayavani is now on Telegram. Click here to join our channel and stay updated with the latest news.

Next