Advertisement
ಗ್ರಾಮೀಣ ಸಹಕಾರ ಸಂಘಗಳ, ಸ್ವಸಹಾಯ ಗುಂಪುಗಳ ನಾಲ್ವರು ಸದಸ್ಯರ ಕುಟುಂಬವೊಂದಕ್ಕೆ ವಾರ್ಷಿಕ 500 ರೂ.ಗಳ ವಂತಿಗೆ ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಶೇ. 20ರಷ್ಟು (100 ರೂ.) ಹೆಚ್ಚುವರಿಯಾಗಿ ಪಾವತಿಸಬೇಕು.
Related Articles
ಸಹಕಾರ ಸಂಘಗಳ ಸದಸ್ಯರಿಗೆ ಆರೋಗ್ಯ ಸೇವೆ ನೀಡಲು 2003ರಲ್ಲಿ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರಕಾರ ಆರಂಭಿಸಿತ್ತು. ಆದರೆ 2018 ರಲ್ಲಿ ರಾಜ್ಯದ ಎಲ್ಲರಿಗೂ ಸಾರ್ವತ್ರಿಕ ಆರೋಗ್ಯ ರಕ್ಷಣೆ ನೀಡಲು ಆರೋಗ್ಯ ಕರ್ನಾಟಕ ಯೋಜನೆ ಅನುಷ್ಠಾನಗೊಳಿಸಿದ ಸರಕಾರ 2018ರಲ್ಲಿ ಯಶಸ್ವಿನಿ ಆರೋಗ್ಯ ಯೋಜನೆಯನ್ನು ರದ್ದುಗೊಳಿಸಿತ್ತು. ಪ್ರಸ್ತುತ ಇದೇ ಯೋಜನೆಗೆ ಮರು ಚಾಲನೆ ನೀಡಲಾಗಿದೆ.
Advertisement
ಬೇಕಿರುವ ಅರ್ಹತೆಯಶಸ್ವಿನಿಯ ಫಲಾನುಭವಿಯಾಗಲು ಕನಿಷ್ಠ3 ತಿಂಗಳು ಮುಂಚಿತವಾಗಿ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಗ್ರಾಮೀಣ ಸಹಕಾರ ಸಂಘ, ಬ್ಯಾಂಕ್‌ಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀ ಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು.